ಗುರುವಾರದ 6 ಪ್ರಮುಖ ಸುದ್ದಿಗಳ ರೌಂಡಪ್

ಎಲ್ಲೂ ಹೋಗೋಲ್ಲ ಸೋಮಣ್ಣ : ವಸತಿ ಸಚಿವ ಸೋಮಣ್ಣ ಕೊನೆಗೂ ಅಂತಿಮ ಗೊಂದಲಕ್ಕೆ ತೆರೆ ಎಳೆದಿದ್ದು, ಬಿಜೆಪಿ ಬಿಡುವುದಿಲ್ಲ ಎಂದು ಘೋಷಿಸಿದ್ದಾರೆ. ಗೋವಿಂದರಾಜನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.( ಕಣ್ಣೀರಿಟ್ಟ ಸೋಮಣ್ಣ)
ಪಕ್ಷದಿಂದ ಕೈ ಬಿಡಿ : ಟಿಕೆಟ್ ಗಾಗಿ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸುವಂತೆ ಹೈ ಕಮಾಂಡ್ ಖಡಕ್ ಆದೇಶ ನೀಡಿದೆ.(ಈ ಸಾವು ನ್ಯಾಯವೇ? )
ಬಳ್ಳಾರಿಯಲ್ಲಿ ಹಣ ಪತ್ತೆ : ಚುನಾವಣೆಗೆ ಕುರುಡು ಕಾಂಚಾಣದ ಪ್ರಭಾವ ಆರಂಭವಾಗಿದ್ದು, ಬಳ್ಳಾರಿಯ ಮೋತಿ ವೃತ್ತದಲ್ಲಿ ವ್ಯಕ್ತಿಯೊಬ್ಬ ಸೈಕಲ್ ನಲ್ಲಿ ಸಾಗಿಸುತ್ತಿದ್ದ 41 ಲಕ್ಷ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಣ ಯಾವ ಪಕ್ಷಕ್ಕೆ ಸೇರಿದ್ದು ಎಂದು ತನಿಖೆ ನಡೆಯುತ್ತಿದೆ. ಸೈಕಲ್ ನಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಧೈರ್ಯ ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಮದ್ಯ ವಶ : ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 192 ಬಾಕ್ಸ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾವ ಪಕ್ಷಕ್ಕೆ ಸೇರಿದ ಮದ್ಯ ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಿಜೆಪಿಯಲ್ಲಿ ರಾಜೀನಾಮೆ : ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ರಾಜೂಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆನಂದ್ ಸಿಂಗ್ ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ. (ಇನ್ನೂ ಎಷ್ಟುಮಂದಿ ಹೋಗ್ತಾರೋ? )
ಶುಕ್ರವಾರದ ಮಹತ್ವ : ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಮತ್ತು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಎರಡು ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಬಿಜೆಪಿಯ 170 ಅಭ್ಯರ್ಥಿಗಳ ಪಟ್ಟಿ ಮತ್ತು ಕಾಂಗ್ರೆಸ್ ನ ಮೊದಲ ಪಟ್ಟಿ ಬಿಡುಗಡೆಗೊಳ್ಳುವುದು ಬಹುತೇಖ ಖಚಿತವಾಗಿದೆ.
ಸಿದ್ದುಗೆ ಆಪರೇಷನ್ : ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡಿದ್ದರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಇಂದು ಮೈಸೂರಿನ ವಿಕ್ರಂ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಆಪರೇಷನ್ ಯಶಸ್ವಿಯಾಗಿದ್ದು, ಸಿದ್ದರಾಮಯ್ಯ ಅವರಿಗೆ ಮೂರು ದಿನಗಳ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ಇವುಗಳನ್ನು ಓದಿ
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications