Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತೆಂಡೂಲ್ಕರ್!

ಬೆಂಗಳೂರು, ಏ 5: ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡುವಲ್ಲಿ ಕಾಂಗ್ರೆಸ್ ಪಾತ್ರ ಬಲು ದೊಡ್ಡದು ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಮುಖಂಡರು ಅವರನ್ನು ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಕರೆತರಲು ಹರಸಾಹಸ ಪಡುತ್ತಿದ್ದಾರೆ.

ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಈ ವಿಷಯವನ್ನು ಸ್ಪಷ್ಟ ಪಡಿಸಿದ್ದು, ಸಚಿನ್ ರಾಜ್ಯಸಭೆ ಸದಸ್ಯರಾಗುವಲ್ಲಿ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಪೃಥ್ವಿರಾಜ್ ಚವಾಣ್ ಪ್ರಮುಖ ಕಾರಣ. ಹಾಗಾಗಿ ಚವಾಣ್ ಮೂಲಕ ತೆಂಡೂಲ್ಕರ್ ಅವರನ್ನು ಪ್ರಚಾರಕ್ಕೆ ಕರೆತರಲು ತೀವ್ರ ಪ್ರಯತ್ನ ನಡೆಸುತ್ತಿದ್ದೇವೆ.

ಕನಿಷ್ಠ ಎರಡು ದಿನವಾದರೂ ಸಚಿನ್ ಅವರನ್ನು ಕರೆತರಲು ರಾಷ್ಟ್ರೀಯ ಮಟ್ಟದಲ್ಲಿ ಪ್ರಯತ್ನವನ್ನು ಈಗಾಗಲೇ ಆರಂಭಿಸಿದ್ದೇವೆ. ಚವಾಣ್ ಮೂಲಕ ತೆಂಡೂಲ್ಕರ್ ಮೇಲೆ ಪ್ರಭಾವ ಬೀರಲು ನಿರ್ಧರಿಸಿದ್ದೇವೆ. ಒಂದು ವೇಳೆ ನಮ್ಮ ಮನವಿಗೆ ಓಗೊಟ್ಟು ಸಚಿನ್ ಪ್ರಚಾರಕ್ಕೆ ಬಂದರೆ ಪಕ್ಷಕ್ಕೆ ಲಾಭವಾಗಲಿದೆ ಎಂದು ಮತ್ತಿಕಟ್ಟಿ ಹೇಳಿದ್ದಾರೆ.

ರಾಷ್ಟ್ರೀಯ ಮುಖಂಡರನ್ನು ಕರೆತಂದು ರಾಜ್ಯದ ಹಲವಡೆ ಸಾರ್ವಜನಿಕ ಸಭೆ ನಡೆಸುವ ಇರಾದೆಯಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.

ಬಹುತೇಕ ರಾಜಕೀಯ ಮುಖಂಡರ ಮತ್ತು ಸಿನಿಮಾ ತಾರೆಯರ ಪಟ್ಟಿ ಅಂತಿಮವಾಗಿದೆ. ನಾಲ್ಕು ಹಂತದ ಪ್ರಚಾರ ನಡೆಸುವ ಕಾರ್ಯತಂತ್ರ ರೂಪಿಸಲಾಗಿದೆ ಎಂದು ಮತ್ತಿಕಟ್ಟಿ ಹೇಳಿದ್ದಾರೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಇಂತಿದೆ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಸೋನಿಯಾ ಗಾಂಧಿ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮೂರು ಹಂತದಲ್ಲಿ ಪ್ರಚಾರದಲ್ಲಿ ಭಾಗವಹಿಸಲು ಕೋರಿದ್ದೇವೆ. ಕರಾವಳಿ ಭಾಗ ಹೊರತು ಪಡಿಸಿ ಮಿಕ್ಕ ಭಾಗದಲ್ಲಿ ಸಾರ್ವಜನಿಕ ಸಭೆಗೆ ರೂಪುರೇಶೆ ಅಂತಿಮಗೊಳಿಸುತ್ತಿದ್ದೇವೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಮನಮೋಹನ್ ಸಿಂಗ್
ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ವಿವಿಧ ಹತ್ತು ದಿನಾಂಕಗಳಲ್ಲಿ ಪ್ರಚಾರದಲ್ಲಿ ಭಾಗವಹಿಸುವಂತೆ ಕೋರಲಾಗುತ್ತದೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಪಿ ಚಿದಂಬರಂ
ಕೇಂದ್ರ ಹಣಕಾಸು ಸಚಿವ ಚಿದಂಬರಂ ಅವರನ್ನು ತಮಿಳು ಭಾಷಿಗರು ಹೆಚ್ಚಾಗಿರುವ ಪ್ರದೇಶದಲ್ಲಿ ಪ್ರಚಾರದಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಚಿರಂಜೀವಿ
ಸಚಿವ ಚಿರಂಜೀವಿ ಅವರನ್ನು ರಾಜ್ಯದ ಆಂಧ್ರ ಗಡಿಯ ಪ್ರದೇಶಗಳಲ್ಲಿ ಪ್ರಚಾರದಲ್ಲಿ ಭಾಗವಹಿಸುವಂತೆ ವಿನಂತಿಸಿಕೊಂಡಿದ್ದೇವೆ. ಇದಕ್ಕೆ ಚಿರು ಸಮ್ಮತಿ ಸೂಚಿಸಿದ್ದಾರೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ರಾಹುಲ್ ಗಾಂಧಿ
ಉಪಾಧ್ಯಕ್ಷ ರಾಹುಲ್ ಗಾಂಧಿ ಕನಿಷ್ಠ ನಾಲ್ಕು ದಿನ ಪ್ರಚಾರದಲ್ಲಿ ಭಾಗವಹಿಸುವಂತೆ ವಿನಂತಿಸಿಕೊಳ್ಳಲಾಗುವುದು. ಸೋನಿಯಾ ಗಾಂಧಿ ಪ್ರಚಾರ ಮಾಡಿದ ಪ್ರದೇಶಗಳನ್ನು ಹೊರತು ಪಡಿಸಿ ಬೇರೆ ಕಡೆ ಪ್ರಚಾರಕ್ಕೆ ವೇಳಾಪಟ್ಟಿ ರೂಪಿಸಲಾಗುವುದು.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಸಚಿನ್ ಪೈಲಟ್, ಜ್ಯೋತಿರಾಧಿತ್ಯ ಸಿಂದ್ಯ
ಪಕ್ಷದ ಈ ಇಬ್ಬರು ಮುಖಂಡರನ್ನು ರಾಹುಲ್ ಗಾಂಧಿಯವರೊಂದಿಗೆ ಭಾಗವಸಿಲು ಮನವಿ ಸಲ್ಲಿಸಲಿದ್ದೇವೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಿರಣ್ ಕುಮಾರ್ ರೆಡ್ಡಿ, ಪುರಂದರೇಶ್ವರಿ
ತೆಲುಗು ಭಾಷಿಗರು ಹೆಚ್ಚಿರುವ ಯಾದಗಿರಿ, ರಾಯಚೂರು, ಕೋಲಾರ ಭಾಗದಲ್ಲಿ ಇವರು ಪ್ರಚಾರ ನಡೆಸುವರು.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಎಸ್.ಎಂ.ಕೃಷ್ಣ, ಸಚಿವರಾದ ಕೆ.ಎಚ್.ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ
ಮಾಜಿ ಸಚಿವ ಎಸ್.ಎಂ.ಕೃಷ್ಣ, ಸಚಿವರಾದ ಕೆ.ಎಚ್.ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಅಂಬರೀಶ್
ಪಕ್ಷದ ಮಂಡ್ಯ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ರೆಬೆಲ್ ಸ್ಟಾರ್ ಅಂಬರೀಶ್ ತನ್ನ ಕ್ಷೇತ್ರದ ಜೊತೆಜೊತೆಗೆ ರಾಜ್ಯಾದ್ಯಂತ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಗೋಲ್ಡನ್ ಗರ್ಲ್ ರಮ್ಯಾ, ಭಾವನಾ
ಇಬ್ಬರು ತಾರಾಮಣಿಗಳು ರಾಜ್ಯಾದ್ಯಂತ ಪಕ್ಷದ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

ಚಾಲೆಂಜಿಂಗ್ ಸ್ಟಾರ್ ದರ್ಶನ್, ಶಶಿಕುಮಾರ್
ದರ್ಶನ್ ಕಾಂಗ್ರೆಸ್ ಪಕ್ಷದ ಪರವಾಗಿ ಮತ ಯಾಚಿಸಲಿದ್ದಾರೆ. ಪ್ರಮುಖವಾಗಿ ಅಂಬರೀಶ್ ಸ್ಪರ್ಧಿಸುವ ಕ್ಷೇತ್ರದಲ್ಲಿ ಬಹುವಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ದರ್ಶನ್ ಟ್ವೀಟ್ ಕೂಡಾ ಮಾಡಿದ್ದಾರೆ. ಜೊತೆಗೆ ಶಶಿಕುಮಾರ್ ಕೂಡಾ ಪ್ರಚಾರಕ್ಕೆ ಪಕ್ಷಕ್ಕೆ ಸಾಥ್ ನೀಡಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+