ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿತ 27 ಸಾವು

|
Google Oneindia Kannada News

building collapsed
ಥಾಣೆ, ಏ.5 : ಮಹಾರಾಷ್ಟ್ರದ ಥಾಣೆಯಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, 27 ಜನರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಂಭವವಿದೆ.

ಗುರುವಾರ ಸಂಜೆ ಸುಮಾರು 6.30ರ ಸುಮಾರಿಗೆ ಕಟ್ಟದ ಕುಸಿದು ಬಿದ್ದಿದೆ. 64 ಕ್ಕೂ ಅಧಿಕ ಮಂದಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು 12ಕ್ಕೂ ಅಧಿಕ ಅಗ್ನಿ ಶಾಮಕದಳಗಳು ನಿರಂತರವಾಗಿ ಕಾರ್ಯಚರಣೆಯಲ್ಲಿ ತೊಡಗಿವೆ.

ಶಾಹಿ ಧಗೀರ್ ಪ್ರದೇಶಕ್ಕೆ ಸೇರಿದ ಈ ಕಟ್ಟಡದಲ್ಲಿ 35ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದವು ಎಂದು ತಿಳಿದು ಬಂದಿದೆ. ಕಟ್ಟಡವನ್ನು ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿಕೊಂಡು ನಿರ್ಮಿಸಲಾಗಿದ್ದು, ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ ನಿರ್ಮಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಸಹ ಅವಶೇಷಗಳ ತೆರವು ಕಾರ್ಯಚರಣೆ ಮುಂದುವರೆದಿದ್ದು, ಐದು ಶವಗಳನ್ನು ಹೊರತೆಗೆಯಲಾಗಿದೆ. 24 ಅಂಬ್ಯುಲೆನ್ಸ್ ಗಳು, ಸ್ಥಳೀಯ ಪೊಲೀಸರು, ಸ್ವಯಂ ಸೇವಕರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಕ್ಕೆ ತೆರವು ಕಾರ್ಯಚರಣೆಗೆ ಸಹಾಯ ಮಾಡುತ್ತಿದ್ದಾರೆ.

ಕಟ್ಟಡದ ಮಾಲೀಕ ಪರಾರಿಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯ ಪಾಲಿಕೆ ವ್ಯಾಪ್ತಿಯಿಂದ ಯಾವುದೇ ಪ್ರಮಾಣ ಪತ್ರ ಪಡೆಯದೇ ಕಟ್ಟಡವನ್ನು ನಿರ್ಮಿಸಲಾಗಿತ್ತು. ಮಾತ್ರವಲ್ಲ, ಮೂರು ಅಂತಸ್ತಿನ ಕಟ್ಟಡವನ್ನು ನಾಲ್ಕನೇ ಅಂತಸ್ತಿಗೂ ವಿಸ್ತರಣೆ ಮಾಡುವ ನಿರ್ಮಾಣ ಕಾರ್ಯವೂ ನಡೆಯುತ್ತಿತ್ತು.

ಜಿಲ್ಲಾಧಿಕಾರಿ ಮನೋಜ್ ಘೋಹದ್, ಸ್ಥಳೀಯ ಪಾಲಿಕೆ ಸದಸ್ಯರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಥಾಣೆ ಸರ್ಕಾರಿ ಆಸ್ಪತ್ರೆ, ಜೆಜೆ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿಲಾಗಿದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
Building collapse in Thane on Thursday April,4 24 people died in incident. 64 people were injured. The building collapsed at around 6:30 PM, the officials said, adding, the injured were rushed to various hospitals. In Three floor building around 35 families were living. Rescue and relief operations continued
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X