ಬಿಜೆಪಿಗೆ ತೊರೆದ ಪ್ರತಾಪ್ ಗೌಡ, ಆನಂದ್ ಸಿಂಗ್

Anand Singh
ಬೆಂಗಳೂರು, ಏ.6 : ವಿಧಾನಸಭೆ ಚುನಾವಣೆಗೆ ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಅಭ್ಯರ್ಥಿಗಳು ತಮ್ಮ ಲೆಕ್ಕಾಚಾರ ಆರಂಭಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ವಂಚಿತ ಹೊಸಪೇಟೆ ವಿಜಯ ನಗರ ಶಾಸಕ ಆನಂದ್ ಸಿಂಗ್ ಪಕ್ಷೇತರರಾಗಿ ಸ್ಪರ್ಧಿಸಲು ತಯಾರಾಗಿದ್ದರೆ, ಮಸ್ಕಿ ಬಿಜೆಪಿ ಶಾಸಕ ಪ್ರತಾಪ್ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕೈ ಹಿಡಿದಿದ್ದಾರೆ.

ಶನಿವಾರ ರಾಯಚೂರು ಜಿಲ್ಲೆ ಮಸ್ಕಿ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರಕುವುದು ಖಚಿತವಾದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ವಿಕಾಸಸೌಧದಲ್ಲಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

ಪ್ರತಾಪ್ ಗೌಡ ರಾಜೀನಾಮೆಯಿಂದ ಬಿಜೆಪಿಯ ಮತ್ತೊಂದು ವಿಕೆಟ್ ಪತನಗೊಂಡಂತಾಗಿದೆ. ಕಾಂಗ್ರೆಸ್ ಸೇರುವ ಉತ್ಸಾಹದಲ್ಲಿದ್ದ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿರಲಿಲ್ಲ. ಶನಿವಾರ ಹೈಕಮಾಂಡ್ ನಾಯಕರಿಂದ ಭರವಸೆ ದೊರಕಿದ್ದರಿಂದ ರಾಜೀನಾಮೆ ನೀಡಿದ್ದಾರೆ.

ಬಳ್ಳಾರಿ ಜಿಲ್ಲೆ ಹೊಸಪೇಟೆ ವಿಜಯನಗರ ಕ್ಷೇತ್ರದ ಶಾಸಕ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದರು.

ಆನಂದ್ ಸಿಂಗ್ ಸಹ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ, ಕೊನೆಗೂ ಅವರಿಗೆ ಕಾಂಗ್ರೆಸ್ ನಾಯಕರು ಟಿಕೆಟ್ ನೀಡಿಲ್ಲ. ಬಿಜೆಪಿ ತೊರೆಯುವುದಾಗಿ ಕೆಲವು ದಿನಗಳ ಹಿಂದೆ ಘೋಷಿಸಿದ್ದ ಅವರು, ಟಿಕೆಟ್ ದೊರೆಯದಿದ್ದರೆ, ಪಕ್ಷೇತರಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು.

ಶನಿವಾರ ಕಂಪ್ಲಿ ಶಾಸಕ ಸುರೇಶ್ ಬಾಬು ಮತ್ತು ಮಸ್ಕಿ ಶಾಸಕ ಪ್ರತಾಪ್ ಗೌಡ ಬಿಜೆಪಿ ತೊರೆದಿದ್ದಾರೆ. ಆನಂದ್ ಸಿಂಗ್ ಸೋಮವಾರ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಜೆಡಿಎಸ್ ಸೇರ್ಪಡೆ : ಎರಡು ದಿನಗಳ ಹಿಂದೆ ಬಿಜೆಪಿ ತೊರೆದಿದ್ದ ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್ ಇಂದು ಜೆಡಿಎಸ್ ಪಕ್ಷಕ್ಕೆ ಅಧಿಕೃವಾಗಿ ಸೇರ್ಪಡೆಗೊಂಡರು. ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಜ್ಜಲ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಶುಕ್ರವಾರ ಮೂರು ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿರುವುದರಿಂದ ವಿವಿಧ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲು ನಾಲ್ಕು ದಿನಗಳು ಬಾಕಿ ಉಳಿದಿವೆ. ಬಿಜೆಪಿಯ ಕೆಲವು ಶಾಸಕರು ಇನ್ನೂ ಪಕ್ಷ ತೊರೆಯುವ ಸಾಧ್ಯತೆ ಇದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+