ಹಾವೇರಿ : ಪೊಲೀಸ್ ಠಾಣೆಯಲ್ಲೇ ಪೇದೆ ಆತ್ಮಹತ್ಯೆ

ಶನಿವಾರ ಬೆಳಗ್ಗೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ್ ಪೊಲೀಸ್ ಠಾಣೆಯ ಪೇದೆ ಗುರುನಾಥ್(29) ಗುಂಡು ಹಾರಿಸಿಕೊಂಡು ಮೃತಪಟ್ಟ ಪೇದೆ. ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ಠಾಣೆಯಲ್ಲಿಯೇ ಗುಂಡು ಹಾರಿಸಿಕೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡ ಪೇದೆಯನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕೌಟುಂಬಿಕ ಜಗಳಗಳೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಮುಖ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಗಂಡನ ಶವ ನೋಡಲು ಆಸ್ಪತ್ರೆಗೆ ಬಂದ ಗುರುನಾಥ್ ಅವರ ಪತ್ನಿ ಆಘಾತದಿಂದ ಅಸ್ವಸ್ಥರಾದರು. ಆಸ್ಪತ್ರೆಯ ಮುಂದೆ ಸಂಬಂಧಿಕರ ರೋಧನ ಮುಗಿಲು ಮಟ್ಟಿತ್ತು.
ಘಟನೆಯ ಕುರಿತು ವಿವಿರವಾದ ತನಿಖೆ ನಡೆಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉನ್ನತ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ಸಚಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಮೃತ ಪೇದೆಯ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸಮಿತಿಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದು ಬರಲಿದೆ.












Click it and Unblock the Notifications