ಬಿಜೆಪಿಗೆ ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ ಗುಡ್ ಬೈ

ಸೋಮವಾರ ಸಂಜೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪತ್ರವನ್ನು ನಾಗೇಂದ್ರ ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ಫ್ಯಾಕ್ಸ್ ಮೂಲಕ ರವಾನಿಸಿದ್ದಾರೆ. ಇದೇವೇಳೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಅವರು ರಾಜೀನಾಮೆ ನೀಡಿದ್ದು, ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿಕೊಟ್ಟಿದ್ದಾರೆ.
ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕೂಡ್ಲಿಗಿ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ನಾಗೇಂದ್ರ ಹೇಳಿದ್ದಾರೆ. ಹಾಲಿ ಶಾಸಕರಾಗಿದ್ದರೂ ಬಿಜೆಪಿ ತನ್ನ ಮೊಲದ ಪಟ್ಟಿಯಲ್ಲಿ ನಾಗೇಂದ್ರ ಅವರಿಗೆ ಟಿಕೆಟ್ ನೀಡಿರಲಿಲ್ಲ. ಇದರಿಂದ ಇಂತಹ ನಿರ್ಧಾರ ಕೈಗೊಂಡಿರಬಹದು ಎಂದು ವಿಶ್ಲೇಷಿಸಲಾಗುತ್ತಿದೆ.
ಕೈಹಿಡಿಯವ ಪ್ರಯತ್ನ : ಕಾಂಗ್ರೆಸ್ ಪಕ್ಷ ಸೇರುವ ಉತ್ಸಾಹದಲ್ಲಿದ್ದ ನಾಗೇಂದ್ರ ಅವರಿಗೆ ಟಿಕೆಟ್ ನೀಡಲು ಪಕ್ಷ ನಿರಾಕರಿಸಿತ್ತು. ಇದರಿಂದಾಗಿ ಅವರು ಯಾವ ಪಕ್ಷ ಸೇರಲಿದ್ದಾರೆ ಎಂಬ ಕುತೂಹಲ ಮೂಡಿತ್ತು. ಕೊನೆಗೂ ಅಂತಿಮ ನಿರ್ಧಾರ ಕೈಗೊಂಡಿರುವ ನಾಗೇಂದ್ರ ಸ್ವತಂತ್ರವಾಗಿ ಸ್ಪರ್ಧಿಸಲು ತಯಾರಾಗಿದ್ದಾರೆ.(ಬಿಜೆಪಿ ಮೊದಲ ಪಟ್ಟಿ )
ಬಳ್ಳಾರಿಯಲ್ಲಿ ಮುದುಡಿದ ಕಮಲ : ಕೂಡ್ಲಿಗಿ ಶಾಸಕರ ರಾಜೀನಾಮೆಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಕಮಲ ಪಾಳಯ ಅಸ್ತಿತ್ವ ಕಳೆದುಕೊಂಡಿದೆ. ಕಂಪ್ಲಿ ಶಾಸಕ ಸುರೇಶ್ ಬಾಬು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಬಿಜೆಪಿ ತೊರೆಯುವುದು ಖಚಿತವಾಗಿದೆ.
ಸೋಮಶೇಖರ ರೆಡ್ಡಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ. ಕರುಣಾಕರ ರೆಡ್ಡಿ ಅವರು ಮಾತ್ರ ಬಿಜೆಪಿಯಲ್ಲಿ ಉಳಿದಿದ್ದು ಅವರಿಗೆ ಮೇ 5ರ ಚುನಾವಣೆಗೆ ಟಿಕೆಟ್ ನೀಡಲಾಗಿದೆ. ಆದರೆ, ಅವರು ಹರಪನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ. ಹರಪನಹಳ್ಳಿ ದಾವಣಗೆರೆ ಜಿಲ್ಲೆಗೆ ಸೇರುತ್ತದೆ. ಆದ್ದರಿಂದ ಬಳ್ಳಾರಿಯಲ್ಲಿ ಬಿಜೆಪಿಗೆ ಯಾವ ನಾಯಕರೂ ಉಳಿದಿಲ್ಲ. (ಬಳ್ಳಾರಿ ವಿಧಾನಸಭಾ ಕ್ಷೇತ್ರಗಳ ಪರಿಚಯ )
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications