ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್ ನಿಂದ ಸ್ಪರ್ಧಿಸುತ್ತಾರಂತೆ ನೈಸ್ ಖೇಣಿ

|
Google Oneindia Kannada News

Ashok Kheny
ಬೀದರ್, ಏ.10: ನೈಸ್ ಸಂಸ್ಥೆ ಮುಖ್ಯಸ್ಥ ಮತ್ತು ಕರ್ನಾಟಕ ಮಕ್ಕಳ ಪಕ್ಷದ ಅಧ್ಯಕ್ಷ ಅಶೋಕ್ ಖೇಣಿ ಬೀದರ್ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ರಾಜ್ಯದ 30 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ್ದಾರೆ.

ಬೀದರ್ ನಲ್ಲಿ ಮಂಗಳವಾರ ಮಾತನಾಡಿದ ಅಶೋಕ್ ಖೇಣಿ, ಭ್ರಷ್ಟ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಕಡಿವಾಣ ಹಾಕಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡುವುದೇ ಕರ್ನಾಟಕ ಮಕ್ಕಳ ಪಕ್ಷದ ಪ್ರಮುಖ ಧ್ಯೇಯ ಎಂದು ಹೇಳಿದರು. ಶೀಘ್ರವೇ 30 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ಬೀದರ್ ಜಿಲ್ಲೆ ನನ್ನ ಹುಟ್ಟೂರು ಈ ಕ್ಷೇತ್ರದಿಂದಲೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಅವರು ಘೋಪಿಸಿದರು. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ನೈಸ್ ಸಂಸ್ಥೆಯ ವತಿಯಿಂದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದಾಗಿ ಅವರು ಹೇಳಿದರು.

ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ : ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ವಿರುದ್ದ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದ ಅಶೋಕ್ ಖೇಣಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರ ನನ್ನ ತವರು ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಬೇರೆ ಕ್ಷೇತ್ರದಿಂದ ಸ್ಪರ್ಧಿಸಲಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಗುಲ್ಬರ್ಗಾದಲ್ಲಿ ಬಿಜೆಪಿಗೆ ಬಂಡಾಯ : ದತ್ತಾತ್ರೇಯ ಪಾಟೀಲ್ ಅವರಿಗೆ ಟಿಕೆಟ್ ನೀಡಿದ್ದರಿಂದ ಗುಲ್ಬರ್ಗಾ ಜಿಲ್ಲೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಶಶಿಲ್ ನಮೋಶಿ ಗುಲ್ಬರ್ಗಾ ದಕ್ಷಿಣ ಕ್ಷೇತದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಮಂಗಳವಾರ ಜೆಡಿಎಸ್ ನಿಂದ ಬಿಜೆಪಿಗೆ ಸೇರ್ಪಡೆಗೊಂಡ ದತ್ತಾತ್ರೇಯ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಶಶಿಲ್ ನಮೋಶಿ ಅಸಮಾಧಾನಗೊಂಡಿದ್ದಾರೆ. (ಬಿಜೆಪಿ ಎರಡನೇ ಪಟ್ಟಿ)

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಬಿಜೆಪಿಗೆ ರಾಜೀನಾಮೆ ನೀಡುವ ಬಗ್ಗೆಯೂ ಚಿಂತಿಸುತ್ತಿದ್ದು, ಬುಧವಾರ ಈ ಕುರಿತು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಅವರು ಘೋಷಿಸಿದ್ದಾರೆ.

ಇಂದು ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು ವಿವಿಧ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮಗೊಳಿಸಿಲ್ಲ. ಸೋಮವಾರದ ನಂತರ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದ್ದು, ನಂತರ ಚುನಾವಣಾ ಕಾವು ಹೆಚ್ಚಾಗುವ ಸಾಧ್ಯತೆ ಇದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
BMIC NICE owner Ashok Kheny announced that he will contest for assembly election from Bidar South constituency. On April, 9 In Bidar he announced that Bidar is my native place, i will contest from this constituency. Karnataka Makkala Paksha will contest in 30 constituency in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X