ದೆಹಲಿಯಲ್ಲಿ ಅಗ್ನಿ ಆಕಸ್ಮಿಕ : ಐವರಿಗೆ ಗಂಭೀರ ಗಾಯ

ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ಕೊಳಗೇರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗುಡಿಸಲುಗಳಲ್ಲಿರುವ ಎಲ್ ಪಿಜಿ ಸಿಲಿಂಡರ್ ಗಳು ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೊಳಗೇರಿಯ ಗುಡಿಸಲುಗಳು ಬೆಂಕಿಗೆ ಆಹುತಿಯಾಗಿ, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಪೊಲೀಸರು ಮತ್ತು ಅಗ್ನಿ ಶಾಮಕದಳದ ಅಧಿಕಾರಿಗಳು ಸ್ಥಳಕ್ಕೆ ಸರಿಯಾದ ಸಮಯಕ್ಕೆ ಆಗಮಿಸಿಲ್ಲ ಎಂದು ಕೊಳಗೇರಿ ನಿವಾಸಿಗಳು ಪ್ರತಿಭಟನೆ ನಡೆಸಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications