ಮೋದಿ, ಹೇಮಮಾಲಿನಿ ಪ್ರಚಾರಕ್ಕೆ ಬರ್ತಾರೆ : ಶೆಟ್ಟರ್

Jagadish Shettar
ಬೆಂಗಳೂರು, ಏ.12: ವಿಧಾನಸಭೆ ಚುನಾವಣೆಗೆ ಬಿಜೆಪಿ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಚುನಾವಣಾ ಪ್ರಚಾರ ಕಾರ್ಯಕ್ಕೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ರಾಜ್ಯಸಭೆ ಸದಸ್ಯೆ ಹೇಮಾಮಾಲಿನಿ ಮತ್ತು ಸ್ಮೃತಿ ಇರಾನಿ ಸ್ಟಾರ್ ಪ್ರಚಾರಕರಾಗಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಏ.20ರ ನಂತರ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ರಾಜ್ಯದಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ತಿಳಿಸಿದರು.

ಭಾನುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂದು ಅಭ್ಯರ್ಥಿಗಳ ಮೂರನೇ ಪಟ್ಟಿ ಅಂತಿಮಗೊಳಿಸಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಜೆಡಿಎಸ್ ಅಪ್ಪಿದ ಅಪ್ಪೊಗೋಳ : ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ನಿರ್ಮಾಪಕ ಆನಂದ್ ಅಪ್ಪುಗೋಳ ಜೆಡಿಎಸ್ ಸೇರಿದ್ದಾರೆ. ಕಾಂಗ್ರೆಸ್ ಟಿಕೆಟ್ ವಂಚಿತರಾದ ಅವರು ಕಿತ್ತೂರು ಕ್ಷೇತ್ರದ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಬಿಜೆಪಿಗೆ ಶಶೀಲ್ ನಮೋಶಿ ವಿದಾಯ : ವಿಧಾನ ಪರಿಷತ್ ಸದಸ್ಯ ಗುಲ್ಬರ್ಗಾ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಶಶೀಲ್ ನಮೋಶಿ ತೆನೆ ಹೊರಲು ಸಿದ್ಧರಾಗಿದ್ದಾರೆ. ಎರಡು ದಿನದಲ್ಲಿ ಜೆಡಿಎಸ್ ಸೇರುವುದಾಗಿ ಅವರು ಘೋಷಿಸಿದ್ದಾರೆ. ಇದರಿಂದ ಬಿಜೆಪಿಯಲ್ಲೂ ಬಂಡಾಯ ಸ್ಪೋಟಗೊಂಡಂತಾಗಿದೆ. (ಬಿಜೆಪಿಯಲ್ಲೂ ಬಂಡಾಯ)

ಬಿಎಸ್ಆರ್ ನಲ್ಲಿ ಸುಂಟರಗಾಳಿ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ನಟಿ ರಕ್ಷಿತಾ ನಿರ್ಧರಿಸಿದ್ದಾರೆ. ಚಾಮರಾಜನಗರ ಕ್ಷೇತ್ರದಿಂದ ರಕ್ಷಿತಾ ಅವರಿಗೆ ಸ್ಪರ್ಧಿಸಲು ಬಿಎಸ್ಆರ್ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. (ರಕ್ಷಿತಾ ಏಕೆ ಸ್ಪರ್ಧಿಸುವುದಿಲ್ಲ)

84 ನಾಮಪತ್ರ : ಶುಕ್ರವಾರ 84 ಅಭ್ಯರ್ಥಿಗಳು ರಾಜ್ಯಾದ್ಯಂತ ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ. ಸೊರಬ ಕ್ಷೇತ್ರದಿಂದ ಮಾಜಿ ಸಚಿವ ಹರತಾಳು ಹಾಲಪ್ಪ ಕೆಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

12 ಲಕ್ಷ ವಶ : ಬೆಂಗಳೂರಿನ ಬಿಡದಿ ಬಳಿಯ ಚೆಕ್ ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ತಪಾಸಣೆ ಸಂದರ್ಭದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾವ ಪಕ್ಷಕ್ಕೆ ಸೇರಿದ ಹಣ ಎಂದು ತಿಳಿದು ಬಂದಿಲ್ಲ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+