ಮಹಾಲಕ್ಷ್ಮೀ ಬಡಾವಣೆಯಲ್ಲಿ ಟೆಕ್ಕಿ ಆತ್ಮಹತ್ಯೆ

suicide
ಬೆಂಗಳೂರು, ಏ.14: ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕುರುಬರ ಹಳ್ಳಿಯಲ್ಲಿ ನಡೆದಿದೆ. ಶನಿವಾರ ಸಂಜೆ ನಾಲ್ಕು ಗಂಟೆಯ ವೇಳೆಗೆ ಸಾಫ್ಟ್‌ವೇರ್ ಇಂಜಿನಿಯರ್ ಮಹೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಧಾವವಾಡ ಮೂಲದವರಾದ ಮಹೇಶ್ ಕುಮಾರ್ (28) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಶನಿವಾರ ಕಚೇರಿಗೆ ರಜೆ ಇರುವುದರಿಂದ ಮಹೇಶ್ ಮನೆಯಲ್ಲೇ ಇದ್ದರು. ಮಧ್ಯಾಹ್ನ ಕುಟುಂಬ ಸದಸ್ಯರೊಂದಿಗೆ ಊಟ ಮಾಡಿ ಮಲಗಿದ್ದ ಮಹೇಶ್ ಸಂಜೆ 6 ಗಂಟೆಯ ವೇಳೆಗೆ ಮನೆಯವರು ಎಬ್ಬಿಸಲು ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಧಾರವಾಡದ ಮಹೇಶ್ ತಂದೆ-ತಾಯಿಯೊಂದಿಗೆ ಆರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಇಲ್ಲಿನ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಶನಿವಾರ ಸಂಜೆ ಆರು ಗಂಟೆಯ ವೇಳೆಗೆ ಮಹೇಶ್ ತಾಯಿ ಅವರನ್ನು ಎಬ್ಬಿಸಲು ಹೋಗಿದ್ದಾರೆ. ಎಷ್ಟು ಕರೆದರೂ ಪ್ರತಿಕ್ರಿಯೆ ನೀಡಿಲ್ಲ. ಕಿಟಕಿಯಿಂದ ನೋಡಿದಾಗಿ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ತಕ್ಷಣ ಬಾಗಿಲು ಒಡೆದು ನೇಣಿನಿಂದ ಇಳಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ, ಆಸ್ಪತ್ರೆಗೆ ಕರೆತರುವ ಮುನ್ನವೇ ಮಹೇಶ್ ಕುಮಾರ್ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾಫ್ಟ್‌ವೇರ್ ಇಂಜಿನಿಯರ್ ಸಾವು : ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಪಾಂಡವಪುರ ಸಮೀಪದ ತೆಣ್ಣೂರು ಕೆರೆಯಲ್ಲಿ ಈಜಾಡಲು ಹೋಗಿ ಸಾವನ್ನಪ್ಪಿದ್ದಾನೆ.

ಬೆಂಗಳೂರಿನ ಹೆಣ್ಣೂರು ಕ್ರಾಸ್ ನ ನಿವಾಸಿಗಳಾದ ಜಯಂತ್, ಪ್ರದೀಪ್, ಸಂದೀಪ್, ವಿಕ್ರಮ್, ವಿಕಾಸ್ ಮೇಲುಕೋಟೆಗೆ ಪ್ರವಾಸ ಹೋಗಿದ್ದರು. ದೇವರ ದರ್ಶನದ ಬಳಿಕ ಜಯಂತ್, ಸಂದೀಪ್, ಪ್ರದೀಪ್ ತೆಣ್ಣೂರು ಕೆರೆಯಲ್ಲಿ ಈಜಾಡಲು ಹೋಗಿದ್ದಾರೆ.

ಸುಳಿಗೆ ಸಿಲುಕಿಕೊಂಡ ಜಯಂತ್ (26) ಮೃತಪಟ್ಟಿದ್ದಾನೆ. ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+