ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ ಕೇಜ್ರಿವಾಲ್

Arvind Kejriwal
ಬೆಂಗಳೂರು, ಏ.15: ಕೇಂದ್ರ ಯುಪಿಎ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಮತ್ತು ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಕರ್ನಾಟಕದಲ್ಲಿ ಮತಯಾಚಿಸಲು ಬರುತ್ತಿದ್ದಾರೆ. ಎಸ್ ಡಿಪಿಐ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೇಜ್ರಿವಾಲ್ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಭ್ರಷ್ಟಾಚಾರದ ಅನೇಕ ಪ್ರಕರಣಗಳು ಬೆಳಕಿಗೆ ಬಂದಗಲೂ ರಾಜ್ಯ ರಾಜಕಾರಣದ ಬಗ್ಗೆ ಒಂದು ಹೇಳಿಕೆ ನೀಡದ ಕೇಜ್ರಿವಾಲ್ ಕರ್ನಾಟಕ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ಅದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಪರವಾಗಿ ಪ್ರಚಾರ ಮಾಡಲು ಅವರು ಆಗಮಿಸುತ್ತಿದ್ದಾರೆ.

ಹಲವು ವರ್ಷಗಳಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್ ಡಿಪಿಐ ವಿಧಾನಸಭೆ ಚುನಾವಣೆಗೆ 25 ಕ್ಷೇತಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಬೆಂಗಳೂರು, ಮಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚು ಗಮನ ಕೇಂದ್ರಿಕರಿಸಿದೆ.

ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ ರಾಜಕೀಯ ಕಡು ವೈರಿ ಬಹುಜನ ಸಮಾಜ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಯುಪಿಎ ಸರ್ಕಾರ ವೈಫಲ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಎಸ್ ಡಿಪಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಚಾರಕ್ಕೆ ಕರೆತಂದಿದೆ.

ಎಲ್ಲೆಲ್ಲಿ ಕೇಜ್ರಿವಾಲ್ ಪ್ರಚಾರ : ಅರವಿಂದ್ ಕೇಜ್ರಿವಾಲ್ ಏ.3ರ ನಂತರ ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು, ಮೈಸೂರು ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಕೇಜ್ರಿವಾಲ್ ಅವರು ಯಾವ ಪ್ರದೇಶಗಳಲ್ಲಿ ಪ್ರಚಾರ ಮಾಡಬೇಕು ಎಂದು ಎಸ್ ಡಿಪಿಐ ಈಗಾಗಲೇ ಯೋಜನೆ ರೂಪಿಸಿ ಕೇಜ್ರಿವಾಲ್ ಗೆ ಕಳುಹಿಸಿ ಕೊಟ್ಟಿದೆ.

ಕಾಂಗ್ರೆಸ್ ಗೆ ಸಂಕಷ್ಟ : ಅರವಿಂದ್ ಕೇಜ್ರಿವಾಲ್ ರಾಜ್ಯಕ್ಕೆ ಆಗಮಿಸುತ್ತಿರುವುದು ಕಾಂಗ್ರೆಸ್ ಪಾಲಿಕೆ ನುಂಗಲಾರದ ತುತ್ತಾಗಿದೆ. ಎಸ್ ಡಿಪಿಐ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡದಿದ್ದರೂ, ಪಕ್ಷದ ಪರವಾಗಿ ಪ್ರಚಾರ ಮಾಡಲಿರುವ ಕೇಜ್ರಿವಾಲ್ ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ಜನರಿಗೆ ತಲುಪಿಸುತ್ತಾರೆ.

ಕರ್ನಾಟಕ ಚುನಾವಣೆಯಲ್ಲಿ ಕೇಂದ್ರ ಯುಪಿಎ ಸರ್ಕಾರದ ಸಾಧನೆ ಬಣ್ಣಿಲು ಪ್ರಯತ್ನಿಸಿದ್ದ ಕಾಂಗ್ರೆಸ್ ಗೆ ಕೇಜ್ರಿವಾಲ್ ರ ಪ್ರಚಾರದಿಂದಾದಿ ಕೊಂಚ ಹಿನ್ನೆಡೆ ಉಂಟಾಗಲಿದೆ. ಕೇಂದ್ರ ಯಪಿಎ ಸರ್ಕಾರದ ಹಗರಣಗಳ ಕುರಿತು ಕೇಜ್ರಿವಾಲ್ ಹಲವು ಮಾಹಿತಿ ತಿಳಿದಿದ್ದಾರೆ. ಅದನ್ನು ಜನರ ಮುಂದೆ ಬಿಚ್ಚಿಟ್ಟರೆ ಕಾಂಗ್ರೆಸ್ ಗೆ ಸ್ವಲ್ಪ ಹಿನ್ನೆಡೆ ಉಂಟಾಗಲಿದೆ.

ಕರ್ನಾಟಕದಲ್ಲಿ ಒಂದೇ ಹಂತದ ಚುನಾವಣೆ ನಡೆಯುತ್ತಿರುವುದರಿಂದ ರಾಷ್ಟ್ರಮಟ್ಟದಿಂದ ಪ್ರಚಾರಕ್ಕೆ ಬರುವ ನಾಯಕರಿಗೂ ಅನುಕೂಲವಾಗಿದೆ. ಎರಡು ಅಥವ ಮೂರು ದಿನಗಳ ಕಾಲ ಅವರು ರಾಜ್ಯದಲ್ಲಿ ಪ್ರಚಾರ ನಡೆಸಿ ಮರಳಬಹುದಾಗಿದೆ. ಬೇರೆ ಪಕ್ಷದಿಂದ ಸ್ಟಾರ್ ಪ್ರಚಾರಕರಾಗಿ ಯಾರು ಆಗಮಿಸುತ್ತಾರೆ ಎಂದು ಕಾದು ನೋಡಬೇಕು.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+