ಶುಭ ಸೋಮವಾರ ಯಾರು ನಾಪಮಪತ್ರ ಸಲ್ಲಿಸುವರು

ನಾಮಪತ್ರ ಸಲ್ಲಿಸಲು ಎರಡು ದಿನಗಳು ಬಾಕಿ ಉಳಿದಿವೆ. ಏ.17ರಂದು ನಾಪಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇಂದು ಸೋಮವಾರ ಉತ್ತಮ ಮುಹೂರ್ತವೆಂದು ಜ್ಯೋತಿಷಿಗಳು ನೀಡಿದ ಸಲಹೆ ಆಧರಿಸಿ ಎಲ್ಲಾ ಪಕ್ಷಗಳ ಪ್ರಮುಖ ನಾಯಕರು ಇಂದು ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ.
ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿ ಮೊದಲ ಚುನಾವಣೆ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಸಹ ಇಂದು ರಾಜಾಜಿನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರ ಕ್ಷೇತ್ರದಿಂದ ಮತ್ತು ಅನಿತಾ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸುತ್ತಾರೆ. ಜೆಡಿಎಸ್ ಹಿರಿಯ ಮುಖಂಡ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಸಹ ಇಂದು ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಗಳು ಎಂದು ಬಿಂಬಿಸಲಾಗುತ್ತಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ವರುಣಾ ಕ್ಷೇತ್ರದಿಂದ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೊರಟಗೆರೆ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿ ಚುನಾವಣಾ ಅಖಾಡಕ್ಕೆ ಅಧಿಕೃವಾಗಿ ಧುಮಕಲಿದ್ದಾರೆ.
ನೂತನವಾಗಿ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಮತ್ತು ಪಕ್ಷದ ರಾಯಚೂರು ನಗರ ಕ್ಷೇತ್ರದ ಅಭ್ಯರ್ಥಿ ನಟಿ ಪೂಜಾಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿಯ ನಾಯಕರು ನಾಳೆ ಅಥವ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಚಿವ ಸುರೇಶ್ ಕುಮಾರ್ ರಾಜಾಜಿನಗರ ಕ್ಷೇತ್ರದಿಂದ, ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಮುಂತಾದವರು ನಾಮಪತ್ರ ಸಲ್ಲಿಸಲಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಕನಕಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಒಟ್ಟಾರೆ ರಾಜ್ಯದ ಪ್ರಮುಖ ರಾಜಕೀಯ ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಯಾರ ಭವಿಷ್ಯ ಏನಾಗಲಿದೆ ಎಂದು ಮೇ 8ರಂದು ತಿಳಿಯಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications