ಭಯ ಪಡದೆ ಶಾಂತಿ ಕಾಪಾಡಿ : ಸಿಎಂ

ಚುನಾವಣೆಗೆ ನಾಮಪತ್ರ ಸಲ್ಲಿಕೆಗಾಗಿ ಹುಬ್ಬಳ್ಳಿಯಲ್ಲಿದ್ದ ಸಿಎಂ ಜಗದೀಶ್ ಶೆಟ್ಟರ್, ಜನರು ಭಯ ಪಡುವ ಅಗತ್ಯವಿಲ್ಲ. ಸರ್ಕಾರ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ನಂತರ ಯಾವ ಸಂಘಟನೆಯ ಕೈವಾಡ ಎಂದು ತಿಳಿಯಲಿದೆ ಎಂದು ಹೇಳಿದ್ದಾರೆ.
ರಾಜಕೀಯ ಪ್ರೇರಿತ : ಬಾಂಬ್ ಸ್ಪೋಟದ ಬಗ್ಗೆ ಗೃಹ ಸಚಿವ ಆರ್.ಅಶೋಕ್ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ. ಚುನಾವಣೆಯಲ್ಲಿ ಮತಗಳನ್ನು ಪಡೆಯುವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಸ್.ಆರ್.ಪಾಟೀಲ್ ಆರೋಪಿಸಿದ್ದಾರೆ.
ಬಿಜೆಪಿ ವೈಫಲ್ಯವಲ್ಲ : ಬಿಜೆಪಿ ಸರ್ಕಾರದ ಐದು ವರ್ಷ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಆಡಳಿತ ನಡೆಸಿದ್ದೇವೆ. ಬಿಜೆಪಿ ಕಚೇರಿ ಬಳಿಯೇ ಇಂತಹ ಕೃತ್ಯ ನಡೆದಿರುವುದರಿಂದ ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ. ದುಷ್ಕೃತ್ಯ ಎಸಗಿದ ಅಪರಾಧಿಗಳನ್ನು ಬಂಧಿಸಲಾಗುವುದು. ಯಾರ ಕೃತ್ಯ ಎಂದು ತನಿಖೆಯಿಂದ ತಿಳಿದು ಬರಲಿದೆ. ಜನರು ಭಯ ಪಡುವ ಅಗತ್ಯವಿಲ್ಲ. ಜನರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಶಾಂತಿ ಕದಡುವ ಯತ್ನ : ಚುನಾವಣಾ ಸಮಯದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಇಂತಹ ಕೃತ್ಯ ನಡೆಸಲಾಗಿದೆ. ಇಂತಹ ಪಿತೂರಿಗಳಿಂದ ಚುನಾವಣೆಯನ್ನು ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ದಾಳಿ ಖಂಡನೀಯ : ಬಾಂಬ್ ಸ್ಪೋಟಿಸಿ ಜನರಲ್ಲಿ ಭಯ ಹುಟ್ಟು ಹಾಕುವುದು ಖಂಡನೀಯ ಕೃತ್ಯ ಎಂದು ಕೇಂದ್ರ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ಹೇಳಿದ್ದಾರೆ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications