ಕೋಡಿಶ್ರೀಗಳ ಧಾಟಿಯಲ್ಲಿ ಭವಿಷ್ಯ ನುಡಿದ ಯಡಿಯೂರಪ್ಪ

ಈ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ ಬಹುಮತ ಪಡೆದೇ ಪಡೆಯುತ್ತದೆ ಘಂಟಾಘೋಷವಾಗಿ ಸಾರುತ್ತಿದ್ದ ಯಡಿಯೂರಪ್ಪನವರು ಈಗ ತಮ್ಮ ಪಕ್ಷಕ್ಕೂ ಬಹುಮತ ದೊರೆಯುವುದಿಲ್ಲ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಆದರೆ, ಯಾವ ಪಕ್ಷದೊಡನೆ ಮೈತ್ರಿ ಬೆಳೆಸುತ್ತಿರುವ ಬಗ್ಗೆ ಅವರು ಸ್ಪಷ್ಟಪಡಿಸಿಲ್ಲ.
ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗೋದು ಗ್ಯಾರಂಟಿ, ನನಗೆ ಮೋಸ ಮಾಡಿದವರನ್ನು ಮತದಾರರು ತಕ್ಕ ಪಾಠ ಕಲಿಸ್ತಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ದಯನೀಯ ಸ್ಥಿತಿ ತಲುಪಿರುವುದನ್ನು ನೋಡಿ ಗುಜರಾತ್ ಸಿಎಂ ನರೇಂದ್ರ ಮೋದಿ ಪ್ರಚಾರಕ್ಕೆ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆಂದು ವ್ಯಂಗ್ಯವಾಡಿದರು. ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಸಹಿಸದೆ ಕೇಂದ್ರ ಸರ್ಕಾರ ಸವಾರಿ ಮಾಡುತ್ತಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್.ಎಂ.ಕೃಷ್ಣ ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿರುವುದು ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ. ಮೇ.8ರ ನಂತರ ಪ್ರಾದೇಶಿಕ ಪಕ್ಷಗಳ ಮುಖಂಡರುಗಳ ಭೇಟಿ ಮಾಡಿ ತೃತೀಯ ರಂಗ ರಚನೆಯ ಬಗ್ಗೆ ಚರ್ಚೆ ಮಾಡಲಾಗುವುದೆಂದು ಹೇಳಿದರು.
ಕೆಜೆಪಿ ಕರ್ನಾಟಕ ರಾಜ್ಯಕ್ಕೆ ಮಾತ್ರ ಸಿಮೀತವಿಲ್ಲ, ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಅಭ್ಯರ್ಥಿಗಳ ಹುಡುಕಾಟದಲ್ಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ, ಯಾದಗಿರಿಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ವೀರಬಸಂತ ರೆಡ್ಡಿ ಮತ್ತು ಗುರುಮಠಕಲ್ ಕ್ಷೇತ್ರದಲ್ಲಿ ವೆಂಕಟರೆಡ್ಡಿ ಮುದ್ನಾಳ್ ಅವರು ಕಣಕ್ಕಿಳಿಸಿದಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications