ಸ್ಪೋಟ : ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಸಿಎಂ

ಬುಧವಾರ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಲುವಾಗಿ ಹುಬ್ಬಳ್ಳಿ ಧಾರವಾಡ ಪ್ರವಾಸದಲ್ಲಿದ್ದ ಶೆಟ್ಟರ್, ಗುರುವಾರ ಬಾಂಬ್ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳಿಂ ಘಟನೆಯ ಕುರಿತು ಮಾಹಿತಿ ಪಡೆದರು.
ನಂತರ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ನಂತರ ಮಾತನಾಡಿದ ಅವರು, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತನಿಖೆಯ ಪ್ರಗತಿ ಮತ್ತು ಕೈಗೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಶೆಟ್ಟರ್ ಹೇಳಿದರು.
ಚೌಳಿ ಮಠದ ತನಿಖೆ ಸಿಐಡಿ : ಬೀದರ್ ಜಿಲ್ಲೆಯ ಚೌಳಿ ಮಠದಲ್ಲಿ ನಡೆದ ಮೂವರು ಸ್ವಾಮೀಜಿಗಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗುವುದು ಎಂದು ಸಿಎಂ ಶೆಟ್ಟರ್ ಹೇಳಿದ್ದಾರೆ. ವೀರಶೈವ ಸಂಘಟನೆಗಳು ಘಟನೆಯ ತನಿಖೆಯನ್ನು ಸಿಐಡಿ ಅಥವ ಸಿಓಡಿಗೆ ವಹಿಸುವಂತೆ ಮನವಿ ಮಾಡದ್ದವು. ಮನವಿಯನ್ನು ಪುರಸ್ಕರಿಸಿ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಶೆಟ್ಟರ್ ಹೇಳಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ











Click it and Unblock the Notifications