ಬಾಂಬ್ ಇಟ್ಟಿದ್ದು ಖುದ್ದು ಯಾಸಿನ್ ಭಟ್ಕಳ್

Hyderabad Twin Blasts- Bomb planted by Yasin Bhatkal- NIA,
ನವದೆಹಲಿ, ಏ. 18: ಫೆಬ್ರವರಿಯಲ್ಲಿ ಸಂಭವಿಸಿದ ಹೈದರಾಬಾದ್ ಅವಳಿ ಸ್ಫೋಟದಲ್ಲಿ ಒಂದು ಕಡೆ ಬಾಂಬ್ ಇಟ್ಟಿದ್ದು ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ (IM) ನಾಯಕ ಯಾಸಿನ್ ಭಟ್ಕಳನೇ ಎಂದು ರಾಷ್ಟ್ರೀಯ ತನಿಖಾ ದಳ (NIA) ತಿಳಿಸಿದೆ.

ಫೆ. 21ರಂದು ಸಂಭವಿಸಿದ ಅವಳಿ ಸ್ಫೋಟದಲ್ಲಿ ಬಾಂಬ್ ಇಟ್ಟವರ ಪೈಕಿ ಒಬ್ಬ ಕರ್ನಾಟಕದ ಸಯ್ಯದ್ ಅಹಮದ್ ಝರಾರ್ ಸಿದ್ದಿಬಪ್ಪಾ @ ಯಾಸಿನ್ ಭಟ್ಕಳನೇ ಎಂದು CCTV ದೃಶ್ಯಾವಳಿಗಳನ್ನು ಆಧರಿಸಿ NIA ತಿಳಿಸಿದೆ.

ದಿಲ್ ಸುಖ್ ನಗರದ ಬಸ್ ಸ್ಟಾಂಡಿನಲ್ಲಿ ಅಂದು ಏನಾಯಿತೆಂದರೆ ವ್ಯಕ್ತಿಯೊಬ್ಬ ಬಾಂಬ್ ತುಂಬಿರುವ ಚೀಲವನ್ನು ಕೈಯಲ್ಲಿ ಹಿಡಿದುರುವುದು CCTVಯಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಮತ್ತು ಅವನು ಯಾಸಿನ್ ಭಟ್ಕಳನೇ ಹೌದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಮತ್ತೊಂದು ಸ್ಫೋಟದಲ್ಲಿ ಸೈಕಲಿನಲ್ಲಿ ಬಾಂಬ್ ಸಾಗಿಸಿಟ್ಟವನು ಅಸಾದುಲ್ಲಾ ಅಖ್ತರ್ ಅಲಿಯಾಸ್ ಹಡ್ಡಿ. ಅಸಾದುಲ್ಲಾ ಅಖ್ತರ್ ಅಜಂನಗರದ ನಿವಾಸಿ. 2008ರಿಂದ ಪರಾರಿಯಾಗಿದ್ದಾನೆ.

18 ಮಂದಿಯನ್ನು ಬಲಿ ತೆಗೆದುಕೊಂಡ ಹೈದರಾಬಾದ್ ಅವಳಿ ಸ್ಫೋಟವನ್ನು ನಡೆಸಿದ್ದು ಇಂಡಿಯನ್ ಮುಜಾಹಿದ್ದೀನ್. ಈ ಬಗ್ಗೆ ನಮ್ಮ ಬಳಿ ಬಲವಾದ ಸಾಕ್ಷ್ಯ ಆಧಾರಗಳು ಇವೆ. ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ. ಆದರೆ ಶೀಘ್ರವೇ ಬಂಧಿಸಲಾಗುವುದು. ಇದಕ್ಕೆ ರಿಯಾಜ್ ಭಟ್ಕಳ ಮತ್ತು ಇಕ್ಬಾಲ್ ಭಟ್ಕಳ ನೆರವಾಗಿದ್ದಾರೆ ಎಂದು ಗೃಹ ಸಚಿವಾಲಯಕ್ಕೆ NIA ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+