ಪ್ರೊಡ್ಯೂಸರ್, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಬಂಧನ

ಮುನಿರತ್ನ ಅವರು ಬುಧವಾರ ನಾಮಪತ್ರ ಸಲ್ಲಿಸಬೇಕಾದರೆ ಐದಕ್ಕಿಂತಲೂ ಹೆಚ್ಚು ಮಂದಿಯನ್ನು ತಮ್ಮ ಜೊತೆ ಕರೆದೊಯ್ದಿದ್ದರು. ಹಾಗೂ ಅವರು ಬಳಸಿದ್ದ ವಾಹನಕ್ಕೆ ಚುನಾವಣಾ ಆಯೋಗ ಪರವಾನಗಿ ನೀಡಿರಲಿಲ್ಲ ಎನ್ನಲಾಗಿದೆ.
ಇದನ್ನು ಪ್ರಶ್ನಿಸಿದ ಚುನಾವಣಾ ಅಧಿಕಾರಿ ಜ್ಯೋತಿ ಅವರಿಗೆ ಅವರು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮುನಿರತ್ನ ಅವರನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.
ಚುನಾವಣಾ ಅಧಿಕಾರಿಗೆ ಬೆದರಿಕೆ ಹಾಕಿರುವ ಆರೋಪ ಗಂಭೀರವಾಗಿದ್ದು ಅವರ ಮೇಲೆ ಆಯೋಗ ಏನು ಕ್ರಮಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕು. ಕಾಂಗ್ರೆಸ್ ಟಿಕೆಟ್ ಗಿಟ್ಟಿಸಲು ಮುನಿರತ್ನ ಅವರು ಬಹಳಷ್ಟು ಶ್ರಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು.











Click it and Unblock the Notifications