ಪಾಕ್ ಮಾಜಿ ಅಧ್ಯಕ್ಷ ಫರ್ವೇಜ್ ಮುಷರ್ರಫ್ ಬಂಧನ

ಇಸ್ಲಾಮಾಬಾದ್ ನ ತಮ್ಮ ಚಾಕ್ ಶಹ್ಜಾದ್ ಫಾರ್ಮ್ ಹೌಸ್ ನಲ್ಲಿ ಅವಿತು ಕುಳಿತಿದ್ದ ಮುಷರ‌್ರಫ್ ಅವರನ್ನು, ಗುರುವಾರ ರಾತ್ರಿಯೇ ಬಂಧಿಸುವ ಸಲುವಾಗಿ ಫಾರ್ಮ್ ಹೌಸ್ ಸುತ್ತುವರೆದಿದ್ದ ಪೊಲೀಸರು, ಶುಕ್ರವಾರ ಬೆಳಗ್ಗೆ ತಮ್ಮ ವಶಕ್ಕೆ ಪಡೆದಿದ್ದಾರೆ.
2007ರಲ್ಲಿ ಹಿರಿಯ ನ್ಯಾಯಾಧೀಶರನ್ನು ಜೈಲಿಗೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಷರ್ರಫ್ ಗೆ ಜಾಮೀನು ನೀಡಲು ಇಸ್ಲಾಮಾಬಾದ್ ಹೈಕೋರ್ಟ್ ಗುರುವಾರ ನಿರಾಕರಿಸಿತ್ತು. ತಕ್ಷಣ ಅವರನ್ನು ಬಂಧಿಸುವಂತೆ ಆದೇಶ ನೀಡಿತ್ತು. ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಹ ಇವರ ಜಾಮೀನು ಅರ್ಜಿ ವಜಾಗೊಳಿಸಿತ್ತು.
ಬಂಧನದ ಭೀತಿಯಿಂದಾಗಿ ಬೆಂಗಾವಲು ಪಡೆಯೊಂದಿಗೆ ನ್ಯಾಯಾಲಯದ ಹೊರಗೆ ಓಡಿಬಂದು ಮುಷರ್ರಫ್ ಪರಾರಿಯಾಗಿದ್ದರು. ಪೊಲೀಸ್ ಸಿಬ್ಬಂದಿ ನೋಡುತ್ತಿರುವಂತೆ ಇಸ್ಲಾಮಾಬಾದ್ ಹೊರವಲಯದ ಚಾಕ್ ಶಹ್ಜಾದ್‌ನಲ್ಲಿರುವ ತಮ್ಮ ಫಾರ್ಮ್‌ಹೌಸ್ ತಲುಪಿದ್ದರು.
ಓಡಿ ಹೋಗಿಲ್ಲ : ಮುಷರ‌್ರಫ್ ಬಂಧನದ ಭೀತಿಯಿಂದ ಓಡಿ ಹೋಗಿಲ್ಲ ಎಂದು ಮುಷರ‌್ರಫ್ ನೇತೃತ್ವದ ಆಲ್ ಪಾಕಿಸ್ತಾನ್ ಮುಸ್ಲಿಂ ಲೀಗ್ ಪಕ್ಷದ ಕಾರ್ಯದರ್ಶಿ ಮುಹಮದ್ ಅಮ್ಜದ್ ಹೇಳಿದ್ದರು. ಅವರು ಕೋರ್ಟ್‌ನಿಂದ ಪರಾರಿಯಾಗಿಲ್ಲ. ಪಾಕ್ ಸರಕಾರವೇ ಅವರಿಗೆ ರಕ್ಷಣೆ ನೀಡಿ ಫಾರ್ಮ್‌ಹೌಸ್‌ಗೆ ತಲುಪಿಸಿದೆ ಎಂದು ತಿಳಿಸಿದ್ದರು.
ಪ್ರಕರಣದವೇನು : 2007ರಲ್ಲಿ ಪಾಕಿಸ್ತಾನ ಮೇಲೆ ತುರ್ತು ಪರಿಸ್ಥಿತಿ ಹೇರಿದ ಬಳಿಕ ತಮ್ಮ ಆದೇಶದ ಅನ್ವಯ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದ ಮುಖ್ಯ ನ್ಯಾಯಮೂರ್ತಿ ಇಫ್ತಿಕಾರ್ ಮುಹಮದ್ ಚೌಧರಿ ಸೇರಿದಂತೆ 60 ನ್ಯಾಯಾಧೀಶರನ್ನು ಮುಷರ‌್ರಫ್ ವಜಾಗೊಳಿಸಿ ಜೈಲಿಗೆ ಕಳುಹಿಸಿದ್ದರು.
ಈ ಬಗ್ಗೆ 2009ರ ಆ.11ರಂದು ಮುಷರ‌್ರಫ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ನ್ಯಾಯಾಲಯಕ್ಕೆ ಆಗಮಿಸಿ ವಿವರಣೆ ನೀಡುವಂತೆ ಆದೇಶಿಸಿದ್ದ ನ್ಯಾಯಾಲದ ಸೂಚನೆಯನ್ನು ಮುಷರ‌್ರಫ್ ಲಘುವಾಗಿ ಪರಿಗಣಿಸಿದ್ದರು.
ಆದ್ದರಿಂದ ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಸ್ವಯಂ ಗಡಿಪಾರಿಗೆ ಒಳಗಾಗಿದ್ದ ಮುಷರ್ರಫ್ ಮೇ 11ರಂದು ಪಾಕ್ ಚುನಾವಣೆ ಇರುವುದರಿಂದ ಇತ್ತೀಚೆಗೆ ಪಾಕಿಸ್ತಾನಕ್ಕೆ ಹಿಂದಿರುಗಿದ್ದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications