ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 20-20 ಸರ್ಕಾರ ಸಾಧ್ಯವೇ ಇಲ್ಲ

By Mahesh
|
Google Oneindia Kannada News

G Parameshwar on JDS-BJP coalition
ಉಡುಪಿ, ಏ.22: ಜೆಡಿಎಸ್ ಹಾಗೂ ಬಿಜೆಪಿ ಅವರು ಹೊಂದಾಣಿಕೆ ಮಾಡಿಕೊಂಡು ಮುಂದೆ 20-20 ಸರ್ಕಾರರವನ್ನು ರಚಿಸುವ ಬಗ್ಗೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ 20-20 ಸರ್ಕಾರ ರಚಿಸಲು ಸಾಧ್ಯವೇ ಇಲ್ಲ. ಜನರು ಕಾಂಗ್ರೆಸನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ರವಿವಾರ ಆಯೋಜಿಸಲಾದ ಕಾರ್ಯ ಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್‌ಗೆ ನೇರ ಸ್ಪರ್ಧೆ ಬಿಜೆಪಿಯೇ ಹೊರತು ಜೆಡಿಎಸ್, ಬಿಎಸ್ಸಾರ್, ಕೆಜೆಪಿ ಗಳಲ್ಲ. ರಾಜ್ಯದಲ್ಲಿ ಕಳೆದ ನಾಲ್ಕೂವರೆ ವರ್ಷಗಳ ಅಧಿಕಾರ ನಡೆಸಿದ ಬಿಜೆಪಿ ಜನರಿಗೆ ಸರಿಯಾಗಿ ವೇತನ ಹಾಗೂ ಪಡಿತರ ಚೀಟಿಯನ್ನು ವಿತರಿಸುವಲ್ಲಿ ವಿಫಲವಾಗಿದೆ. ಭ್ರಷಾಚಾರದಿಂದ ರಾಜ್ಯಭಾರ ಮಾಡಿದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ನಾಶವಾಗಿ ಹೋಗಲಿದೆ ಎಂದು ಪರಮೇಶ್ವರ್ ಹೇಳಿದರು,

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಮಾತನಾಡಿ, ರಾಜ್ಯದ ಮೇಲಿರುವ ಎಲ್ಲ ಕಳಂಕಗಳನ್ನು ತೊರೆದು ಹಾಕಿ ಮರಳಿ ಗೌರವವನ್ನು ಪ್ರತಿಷ್ಠಾಪನೆ ಮಾಡಬೇಕಾಗಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಮೋದಿ ಪ್ರಚಾರ ಬಗ್ಗೆ : ನರೇಂದ್ರ ಮೋದಿ ಚುನಾವಣಾ ಪ್ರಚಾರ ನಡೆಸಲು ರಾಜ್ಯಕ್ಕೆ ಬರುವ ಬಗ್ಗೆ ನಮ್ಮದೇನು ತಕರಾರು ಇಲ್ಲ. ಆದರೆ ಅವರು ಮೊದಲು ರಾಜ್ಯ ಬಿಜೆಪಿ ನಾಯಕರ ಭ್ರಷ್ಟಾಚಾರ, ಪಕ್ಷದಲ್ಲಿ ಆಗಿರುವ ಮೂರು ಹೋಳು ಹಾಗೂ ರಾಜ್ಯದ ಪ್ರಗತಿಯ ಹಿನ್ನಡೆ ಬಗ್ಗೆ ರಾಜ್ಯದ ಜನತೆಗೆ ಉತ್ತರ ನೀಡಲಿ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಮಂಗಳೂರು ಹಾಗೂ ಉಡುಪಿ ನಗರವನ್ನು ಮುಂಬೈಗೆ ಸರಿಸಮಾನ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ಹಮ್ಮಿಕೊಳ್ಳ ಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.

ಭಿನ್ನಮತ : ಭಿನ್ನಮತ ಅಂತ ಹೇಳಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳನ್ನು ಮುಂದೆ ಅವಕಾಶ ನೀಡುವ ಭರವಸೆ ನೀಡಲಾಗಿದೆ. ಅದರಂತೆ ಅವರೆಲ್ಲ ನಾಮಪತ್ರಗಳನ್ನು ಹಿಂಪಡೆದಿದ್ದಾರೆ. ಆದುದರಿಂದ ಮುಂದೆ ಪಕ್ಷದಲ್ಲಿ ಅಥವಾ ನಾವು ಅಧಿಕಾರಕ್ಕೆ ಬಂದರೆ ಸರಕಾರದಲ್ಲಿ ಅವರಿಗೆ ಅನ್ಯಾಯ ಆಗದ ರೀತಿಯಲ್ಲಿ ಅವಕಾಶವನ್ನು ಕಲ್ಪಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
KPCC president G Parameshwar rules out possible JDS BJP coalition government formation in near future. Congress will become single largest party and will rule the Karnataka
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X