ಬಿಜೆಪಿಯದು ಭ್ರಷ್ಟ ಸರ್ಕಾರ : ರಾಹುಲ್ ಗಾಂಧಿ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಮಂಗಳವಾರ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ರಾಹುಲ್ ಗಾಂಧಿ, ರಾಷ್ಟ್ರೀಯ ನಾಯಕರು ದೆಹಲಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾರೆ. ಆದರೆ, ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುತ್ತಲೇ ಐದು ವರ್ಷ ಅಧಿಕಾರ ನಡೆಸಿದ್ದಾರೆ ಎಂದು ದೂರಿದರು.
ಬಿಜೆಪಿ ಸರ್ಕಾರ ರಚನೆಯಾಗಿದ್ದೇ ಇಬ್ಬರು ಭ್ರಷ್ಟರಿಂದ ಎಂದು ಯಡಿಯೂರಪ್ಪ ಮತ್ತು ಜನಾರ್ದನ ರೆಡ್ಡಿ ಅವರ ವಿರುದ್ದ ಪರೋಕ್ಷ ವಾಗ್ದಾಳಿ ನಡೆಸಿದರು. ಬಿಜೆಪಿ ಕೇವಲ ಸುಳ್ಳು ಭರವಸೆ ನೀಡಿ ಜನರನ್ನು ವಂಚಿಸುತ್ತಿದೆ. ಐದು ವರ್ಷಗಳ ಅವಧಿಯಲ್ಲಿ ಮೂವರು ಮುಖ್ಯಮಂತ್ರಿಗಳು ರಾಜ್ಯವನ್ನು ಕೊಳ್ಳೆ ಹೊಡೆದಿದ್ದಾರೆ ಎಂದು ಆರೋಪಸಿದರು.
ಉದ್ಯೋಗ ಸೃಷ್ಟಿ, ವಿದ್ಯುತ್ ಸಮಸ್ಯೆ, ಕುಡಿಯುವ ನೀರು ಮುಂತಾದ ಸಮಸ್ಯೆಗಳನ್ನು ಬಗೆಹರಿಸಲು ಬಿಜೆಪಿ ವಿಫಲವಾಗಿದೆ. ಕಾಂಗ್ರೆಸ್ ಎಂದರೆ ಅಭಿವೃದ್ಧಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಭಿವೃದ್ಧಿ ಎಂದರೆ ಏನು ಎಂದು ಕೆಲಸ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.
ಬಿಜೆಪಿ ರಾಜ್ಯದ ಜನರ ಸಂಕಷ್ಟವನ್ನು ಮರೆತು ಬಿಟ್ಟಿದೆ. 24 ಗಂಟೆ ವಿದ್ಯುತ್ ನೀಡುವುದಾಗಿ ಬಿಜೆಪಿ ಹೇಳಿತ್ತು. ಆದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು. ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಕಾಂಗ್ರೆಸ್‌ನಿಂದ ಮಾತ್ರ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯ. ಆದ್ದರಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.
ಕ್ಷಮೆ ಕೋರುತ್ತೇನೆ : ಕಾರ್ಯಕ್ರಮಕ್ಕೆ ಮೂರು ಗಂಟೆ ತಡವಾಗಿ ಆಗಮಿಸಿದ್ದೇನೆ. ಬಿಸಿಲಲ್ಲಿ ಕಾಯಿಸಿದ ಕಾರಣಕ್ಕಾಗಿ ಕ್ಷಮೆ ಕೋರುತ್ತೇನೆ ಎಂದು ಜನರ ಚಪ್ಪಾಳೆ ಗಿಟ್ಟಿಸಿದರು. (ಮೂರು ಗಂಟೆ ತಡವಾಗಿ ಬಂದ ರಾಹುಲ್ ಗಾಂಧಿ)
ಕೇಂದ್ರ ನಾಯಕರೇ ಟಾರ್ಗೆಟ್ : ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿಸಲಾಗುತ್ತಿದೆ. ರಾಹುಲ್ ಭಾಷಣದ ತುಂಬಾ ರಾಷ್ಟ್ರೀಯ ಬಿಜೆಪಿ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದಾರೆ. ರಾಹುಲ್ ಬಿಜೆಪಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ರಾಜ್ಯಕ್ಕೆ ಕಾಲಿಟ್ಟಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಸೇರಿದಂತೆ ಹಲವು ನಾಯಕರು ರಾಹುಲ್ ಗೆ ಸಾಥ್ ನೀಡಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications