ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಡಾಯ ಬಿಸಿಗೆ ತುಪ್ಪ ಸುರಿದ ಸಿದ್ದರಾಮಯ್ಯ

By Mahesh
|
Google Oneindia Kannada News

Siddaramaiah warns Rebel Leaders
ದಾವಣಗೆರೆ, ಏ. 23: ಅಧಿಕೃತ ಅಭ್ಯರ್ಥಿಗಳಿಗೆದುರಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಡೈಲಾಗ್ ಮುಗಿಯುವಷ್ಟರಲ್ಲೇ ಬಳ್ಳಾರಿಯಲ್ಲಿ ಅಧಿಕೃತ ಅಭ್ಯರ್ಥಿ ಅನಿಲ್ ಲಾಡ್ ಅವರಿಗೆ ಬಂಡಾಯದ ಬಿಸಿ ತಟ್ಟಿದೆ.

ಪಕ್ಷ ನಿಷ್ಠರು ಕಾಂಗ್ರೆಸ್ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು. ಶಿಸ್ತು ಉಲ್ಲಂಘಿಸಿ ಅಧಿಕೃತ ಅಭ್ಯರ್ಥಿಗಳೆದುರು ಸ್ಪರ್ಧಿಸಿರುವ ಬಂಡಾಯ ಅಭ್ಯರ್ಥಿಗಳು ತಾವಾಗಿಯೇ ಪಕ್ಷ ಬಿಟ್ಟುಹೋಗಬೇಕು. ಇಲ್ಲವಾದರೆ ಅಂತಹವರಿಗೆ ನೋಟಿಸ್ ಜಾರಿಗೊಳಿಸಿ ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ದುರಾಡಳಿತದಿಂದ ರೋಸಿಹೋಗಿರುವ ಜನತೆ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ. ರಾಜ್ಯದಲ್ಲಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೆೇರಿ ಬಾರಿಸಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯವಿಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದು, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮ ವಹಿಸಲಾಗುವುದು. ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ವರಿಷ್ಠ ಎಲ್.ಕೆ.ಅಡ್ವಾಣಿ ಬಗ್ಗೆ ಧನಂಜಯ್ ಕುಮಾರ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಲಾಲ್ ಕೃಷ್ಣ ಅಡ್ವಾಣಿಯವರ ಬಗ್ಗೆ ತಮಗೆ ಅಪಾರ ಗೌರವವಿದೆ. ಆದರೆ, ಅವರಿಗೆ ಹಣ ಸಂದಾಯ ಮಾಡಿರುವ ಕುರಿತು ಬಿ.ಎಸ್.ಯಡಿಯೂರಪ್ಪರ ಒಡನಾಡಿ ಧನಂಜಯ್ ಕುಮಾರ್ ಆರೋಪವನ್ನು ಸಹ ತಳ್ಳಿಹಾಕುವಂತಿಲ್ಲ. ಈ ಬಗೆಗಿನ ಸತ್ಯಾಸತ್ಯತೆ ಇನ್ನಷ್ಟೇ ಹೊರಬರಬೇಕಿದೆ ಎಂದರು. ಈ ಸಂದಭರ್ದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್, ಜಿಲ್ಲಾ ವಕ್ತಾರ ಪಿ.ರಾಜಕುಮಾರ್ ಮತ್ತಿತರರು ಹಾಜರಿದ್ದರು.

English summary
Davangere: Congress leader Siddaramaiah warned all rebel congress leaders it better they leave the party no itself otherwise they will have to face tough action
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X