• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾನುವಾರ ಬಸವನಗುಡಿಗೆ ಮೋದಿ ಆಗಮನ

|
ಬೆಂಗಳೂರು, ಏ. 25 : ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ನರೇಂದ್ರ ಮೋದಿ ಬೆಂಗಳೂರಿಗೆ ಏ.28 ಭಾನುವಾರದಂದು ಆಗಮಿಸಲಿದ್ದಾರೆ. ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅಂದು ಮೋದಿ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಲಿದ್ದಾರೆ.

ನರೇಂದ್ರ ಮೋದಿ ಆಗಮನದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ. ಭಾನುವಾರ ಸಂಜೆ 5 ಗಂಟೆಗೆ ಮೋದಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಚುನಾವಣಾ ಪ್ರಚಾರ ಭಾಷಣೆ ಮಾಡಲಿದ್ದಾರೆ ಎಂದು ಹೇಳಿದರು.

ಭಾನುವಾರದ ಒಂದು ಕಾರ್ಯಕ್ರಮಕ್ಕೆ ಮಾತ್ರ ಮೋದಿ ಸಮಯವನ್ನು ನೀಡಿದ್ದಾರೆ. ಹೆಚ್ಚುವರಿಯಾಗಿ ಐದು ದಿನಗಳನ್ನು ಕರ್ನಾಟಕ ಪ್ರಚಾರ ಕಾರ್ಯಕ್ಕೆ ಮೀಸಲಿಡುವಂತೆ ರಾಜ್ಯ ಬಿಜೆಪಿ ಘಟಕ ಮನವಿ ಮಾಡಿದೆ. ಪರಿಶೀಲಿಸಿ ತಿಳಿಸುವುದಾಗಿ ಮೋದಿ ಹೇಳಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಈಗಾಗಲೇ ಒಂದು ಹಂತದ ಪ್ರಚಾರ ಮುಗಿಸಿದ್ದಾರೆ. ರಾಜ್ಯಸಭಾ ಸದಸ್ಯ ಅರುಣ್ ಜೇಟ್ಲಿ ಅಭ್ಯರ್ಥಿಗಳ ಆಯ್ಕೆಯಿಂದ ಪ್ರಣಾಳಿಕೆ ರಚಿಸುವವರೆಗೂ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದರು.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ಉಳಿದ ಜಿಲ್ಲೆಗಳಲ್ಲೂ ಪ್ರಚಾರ ನಡೆಸಬೇಕು ಎಂಬುದು ರಾಜ್ಯ ನಾಯಕರ ಒತ್ತಾಯವಾಗಿದೆ. ಹೆಚ್ಚುವರಿಯಾಗಿ ಐದು ದಿನಗಳ ಹೆಚ್ಚಿನ ಸಮಯವನ್ನು ಮೋದಿಯವರು ನೀಡುವ ಸಾಧ್ಯತೆ ಇದೆ ಎಂದು ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಕರಾವಳಿ ಭಾಗದಲ್ಲಿ ಶುಕ್ರವಾರ ಸಂಸದ ವರುಣ್ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನ ಕೆಲವು ಕ್ಷೇತ್ರಗಳಲ್ಲಿ ಹಿರಿಯ ನಾಯಕಿ ಉಮಾ ಭಾರತಿ ಏ.27ರಿಂದ ಪ್ರಚಾರ ನಡೆಸಲಿದ್ದಾರೆ ಎಂದು ಜೋಶಿ ತಿಳಿಸಿದರು. ( ರಾಷ್ಟ್ರೀಯ ನಾಯಕರ ಪ್ರಚಾರದ ವೇಳಾಪಟ್ಟಿ )

ಮೋದಿ ಕರ್ನಾಟಕ್ಕೆ ಪ್ರಚಾರಕ್ಕೆ ಆಗಮಿಸುವುದಿಲ್ಲ ಎಂಬ ವದಂತಿಗಳಿಗೆ ಕೊನೆಗೂ ತೆರೆ ಬಿದ್ದಿದೆ. ಆದರೆ, ಕೇವಲ ಒಂದು ಕಾರ್ಯಕ್ರಮದಲ್ಲಿ ಮಾತ್ರ ಮಾತನಾಡಲಿದ್ದಾರೆ ಎಂಬುದು ಹಲವು ಜಿಲ್ಲೆಗಳ ಅಭ್ಯರ್ಥಿಗಳಿಗೆ ಬೇಸರ ಮೂಡಿಸಿದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
BJP Karnataka president Prahlad Joshi has confirmed that Gujarat chief minister Narendra Modi would address election campaign rally in Bangalore on 28th April at Basavanagudi National College ground. Karnataka BJP has requested Modi to campaign for 5 days in state.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more