ರಾಷ್ಟ್ರೀಯ ನಾಯಕರ ಚುನಾವಣಾ ಪ್ರಚಾರ ವೇಳಾಪಟ್ಟಿ
ಬೆಂಗಳೂರು, ಏ.25 : ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ರಾಷ್ಟ್ರೀಯ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆತರುತ್ತಿವೆ. ಪಕ್ಷದ ಯೋಜನೆಯಂತೆ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸಿ ಜನರ ಗಮನಸೆಳೆದು, ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸುತ್ತಿದ್ದಾರೆ.
ಕಾಂಗ್ರೆಸ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮನಹೋಹನ್ ಸಿಂಗ್, ಕೇಂದ್ರ ಸಚಿವ ಚಿರಂಜೀವಿ, ಪುರಂದರೇಶ್ವರಿ ಮುಂತಾದವರನ್ನು ರಾಜ್ಯಕ್ಕೆ ಕರೆತಂದು ಮತಬೇಟೆಯಾಡಲು ಸಜ್ಜಾಗಿದೆ. ಬಿಜೆಪಿಯ ರಾಷ್ಟ್ರೀಯ ನಾಯಕರು ಒಂದು ಬಾರಿ ರಾಜ್ಯಕ್ಕೆ ಬಂದು ನಿರ್ಗಮಿಸಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು, ಸುಷ್ಮಾ ಸ್ವರಾಜ್, ವರುಣ್ ಗಾಂಧಿ, ಉಮಾ ಭಾರತಿ ಬಿಜೆಪಿ ಪರವಾಗಿ ಪ್ರಚಾರ ಮಾಡಲು ಆಗಮಿಸುತ್ತಿದ್ದಾರೆ. ಎಲ್.ಕೆ.ಅಡ್ವಾಣಿ, ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು ಒಂದು ಸುತ್ತಿನ ಪ್ರಚಾರ ಕಾರ್ಯ ಮುಗಿಸಿ ಮರಳಿದ್ದಾರೆ.
ಸಂಯುಕ್ತ ಜನತಾದಳದ ಪರವಾಗಿ ಪ್ರಚಾರ ನಡೆಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ.26ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಒಟ್ಟಾರೆ ರಾಷ್ಟ್ರೀಯ ನಾಯಕರ ಪ್ರವಾಸದ ವೇಳಾಪಟ್ಟಿ ಸಿದ್ದವಾಗಿದೆ. ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ ಇದೇ ಅಂತಿಮ ಪಟ್ಟಿಯಾಗಿರುತ್ತದೆ. (ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತೆಂಡೂಲ್ಕರ್! )

ನರೇಂದ್ರ ಮೋದಿ
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬೆಳಗ್ಗೆ 10 ಗಂಟೆಗೆ ಮತ್ತು ಬೆಳಗಾವಿಯಲ್ಲಿ ಮಧ್ಯಾಹ್ನ 1 ಗಂಟಗೆ ಪ್ರಚಾರ ನಡೆಸಲಿದ್ದಾರೆ.

ವರುಣ್ ಗಾಂಧಿ
ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಮತ್ತು ಸಂಸದ ವರುಣ್ ಗಾಂಧಿ ಇಂದು 10 ಗಂಟೆಗೆ ಚಿತ್ರದುರ್ಗ, 12.45ಕ್ಕೆ ಸುರಪುರ, 1.25ಕ್ಕೆ ಬೀಳಗಿ, 5.15ಕ್ಎ ಬೆಳಗಾವಿಯಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇ 1ರಂದು 10.30ಕ್ಕೆ ಮಂಡ್ಯ, 12 ಗಂಟೆಗೆ ಹಾಸನ, 2.30ಕ್ಕೆ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುಲ್ಪರ್ಗದಲ್ಲಿ ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಚಿರಂಜೀವಿ
ಮೆಗಾಸ್ಟಾರ್ ಚಿರಂಜೀವಿ ಏ.29ರಂದು ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಲಾಡ್ ಪರ ಪ್ರಚಾರ ಮಾಡಲಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲೂ ಪ್ರಚಾರ ನಡೆಸಲಿದ್ದು, ದಿನಾಂಕ ನಿಗದಿಯಾಗಿಲ್ಲ.

ನಿತೀಶ್ ಕುಮಾರ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶರದ್ ಯಾದವ್ ಏ.26ರಂದು ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಬೆಳಗಾವಿ, ರಾಯದುರ್ಗ, ಸಿಂಧಿಗಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಉಮಾ ಭಾರತಿ
ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಇಂದು ಮಧ್ಯಾಹ್ನ 3 ಗಂಟೆಗೆ ಚಿಂತಾಮಣಿಯಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಸುಷ್ಮಾ ಸ್ವರಾಜ್
ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಕೊಡಗು ಜಿಲ್ಲೆಯ ಗೋಣಿಕೊಪ್ಪ ಶಿವಮೊಗ್ಗದಲ್ಲಿ ಪ್ರಚಾರ ನಡೆಸಿದ್ದಾರೆ.

ಅರುಣ್ ಜೇಟ್ಲಿ
ಬಿಜೆಪಿ ರಾಜ್ಯ ಸಭಾ ಸದಸ್ಯ ಮತ್ತು ಹಿರಿಯ ನಾಯಕ ಅರುಣ್ ಜೇಟ್ಲಿ ಇಂದು ಸಂಜೆ 6 ಗಂಟೆಗೆ ಮಂಗಳೂರಿನಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ವೆಂಕಯ್ಯ ನಾಯ್ಡು
ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಇಂದು 10 ಗಂಟೆಗೆ ಸರ್ವಜ್ಞ ನಗರ ಮತ್ತು 4.30ಕ್ಕೆ ಯಲಹಂಕದಲ್ಲಿ ಪ್ರಚಾರ ನಡೆಸಲಿದ್ದಾರೆ.

ಮನಮೋಹನ್ ಸಿಂಗ್
ಪ್ರಧಾನಿ ಡಾ.ಮನಹೋಹನ್ ಸಿಂಗ್ ಇಂದು ಹುಬ್ಬಳ್ಳಿ ಯಲ್ಲಿ 10.30ಕ್ಕೆ ಮತ್ತು ಬೆಂಗಳೂರಿನ ಕುಂಬಳಗೋಡಿನಲ್ಲಿ 2.30ಕ್ಕೆ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಎಲ್.ಕೆ.ಅಡ್ವಾಣಿ
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಇಂದು ಬೆಳಗ್ಗೆ 11.30ಕ್ಕೆ ಸೇಡಂ, ಸಂಜೆ 5 ಗಂಟೆಗೆ ಗದಗ, ರಾತ್ರಿ 7 ಗಂಟೆಗೆ ಹುಬ್ಬಳ್ಳಿಯಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ.

ರಾಜನಾಥ್ ಸಿಂಗ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಇಂದು ಬೆಳಗ್ಗೆ 11.30ಕ್ಕೆ ತೀರ್ಥಹಳ್ಳಿ, 4 ಗಂಟೆಗೆ ಸಕಲೇಶಪುರ, 6.15ಕ್ಕೆ ಆನೇಕಲ್ ನಲ್ಲಿ ಪ್ರಚಾರ ನಡೆಲಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications