• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಹುಲ್ ಗಾಂಧಿಗೆ ಸವಾಲು ಹಾಕಿದ ಸಿಎಂ ಶೆಟ್ಟರ್

|

ಮಂಗಳೂರು, ಏ. 26 : ಬಿಜೆಪಿ ಆಡಳಿತದ ಬಗ್ಗೆ ಟೀಕೆ ಮಾಡುವುದು ಬಿಟ್ಟು ಕಾಂಗ್ರೆಸ್ ಅಧಿಕಾರದಲ್ಲಿದ್ದ ಮಾಡಿದ ಸಾಧನೆಗಳ ಅಂಕಿ ಅಂಶಗಳನ್ನು ತೆಗೆದುಕೊಂಡು ಸಾರ್ವಜನಿಕ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಗುರುರವಾರ ಸಂಜೆ ಕುಂದಾಪುರ ತಾಲೂಕಿನ ಉಪ್ಪುಂದದಲ್ಲಿ ಚುನಾವಣಾ ಪ್ರಚಾರ ಸಣೆ ಉದ್ದೇಶಿಸಿ ಮಾತನಾಡಿದ ಸಿಎಂ ಶೆಟ್ಟರ್, ಯಾವ ಸಾಧನೆ ಮಾಡದಿದ್ದರೂ ಬಿಜೆಪಿ ಸರ್ಕಾರವನ್ನು ಟೀಕಿಸುವ ಪ್ರವೃತ್ತಿಯನ್ನು ಕಾಂಗ್ರೆಸಿಗರು ರೂಢಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ದೆಹಲಿಯಿಂದ ಬಂದು ರಾಜ್ಯ ಸರ್ಕಾರದ ಬಗ್ಗೆ ಟೀಕಿಸುವ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಿದ ಸಾಧನೆಯ ಅಂಕಿ-ಅಂಶ ತರಲಿ, ಬಿಜೆಪಿ ಸರ್ಕಾರದ ಸಾಧನೆ ನಾನು ವಿವರಿಸುತ್ತೇನೆ. ಬಹಿರಂಗವಾಗಿ ಒಂದೇ ವೇದಿಕೆಯಲ್ಲಿ ಈ ಚರ್ಚೆ ನಡೆಯಲಿ ಎಂದು ಸವಾಲು ಹಾಕಿದರು.

ರಾಜ್ಯ ಸರ್ಕಾರ ಗ್ರಾಮೀಣ ಭಾಗದ ರಸ್ತೆ ನಿರ್ಮಾಣ, ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಗ್ರಾಮ ಸಡಕ್ ಯೋಜನೆ ಅನ್ವಯ ಮಾಡಿಕೊಡಿ ಎಂದು ಐದು ವರ್ಷಗಳಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದೆ. 10,000 ಹಳ್ಳಿಗಳ ಒಂದು ಕಿ.ಮೀ ರಸ್ತೆಯನ್ನು ಸರ್ಕಾರ ನಿರ್ಮಿಸಿಕೊಟ್ಟಿಲ್ಲ ಎಂದು ದೂರಿದರು.

ರಾಜ್ಯ ಸರ್ಕಾರ ವಿವಿಧ ಯೋಜೆನಗಳ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರದ 50 ಕಿ.ಮೀ.ರಸ್ತೆಯನ್ನು ಅಭಿವೃದ್ಧಿ ಪಡಿಸಿದೆ ಇದು ಸಾಧನೆ ಅಲ್ಲವೇ ಎಂದು ಅವರು ಪ್ರಶ್ನಿಸಿದರು. ಕೆಲಸ ಮಾಡದ ಕಾಂಗ್ರೆಸ್ ಮುಖಂಡರು ಅಪಾದನೆಗಳನ್ನು ಚೆನ್ನಾಗಿ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ಮಾಜಿ ಮುಖ್ಯಮಂತ್ರಿ ಸದಾನಂ ಗೌಡ ಮತ್ತು ನನ್ನ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿವೆ. ರೈತರು ಸೇರಿದಂತೆ ಎಲ್ಲಾ ವರ್ಗಗಳ ಅಭಿವೃದ್ದಿಗೆ ಕ್ರಮ ಕೈಗೊಂಡಿದ್ದೇವೆ. ಚುನಾವಣೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ನೀಡುವಂತೆ ಅವರು ಮನವಿ ಮಾಡಿದರು.

ಮಹಿಳೆಯರಿಗೆ ಆದ್ಯತೆ ನೀಡಿಲ್ಲ : ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಪಡೆಯಲು ಮಹಿಳೆಯರು ಭಾರೀ ಪೈಪೋಟಿ ನಡೆಸಿದ್ದರು. ಸದ್ಯ ಬಿಜೆಪಿಯಲ್ಲಿ ಮಹಿಳಾ ಪರವಾದ ಕೂಗು ಬಿಜೆಪಿಯಲ್ಲಿ ಕೇಳಿಬಂದಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಟಿಕೆಟ್ ಹಂಚಿಕೆಯಲ್ಲಿ ಆದ್ಯತೆ ನೀಡಿಲ್ಲ ಎಂದು ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಎದುರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಆದ್ಯತೆ ನೀಡುತ್ತೇವೆ ಎಂದು ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಸುಷ್ಮಾ ಕೋಪ ಬಿಜೆಪಿ ಚುನಾವಣಾ ಪ್ರಚಾರದ ಮೇಲೆ ಬೀಳುವುದು ಬೇಡ. ಪ್ರಚಾರಕ್ಕೆ ಬರಲಿ ಎಂದು ರಾಜ್ಯ ನಾಯಕರು ಮನವಿ ಮಾಡಿದ್ದಾರೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chief Minister Jagadish Shettar gave an open challenge to Congress vice president Rahul Gandhi to come up with the statistics of the achievements during the tenure of the Congress and the BJP parties in the State and debate it in a public platform.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more