ಚಿಕ್ಕಮಗಳೂರಲ್ಲಿ ಚೊಕ್ಕ ಭಾಷಣ ಮಾಡಿದ ಸೋನಿಯಾ

ವಿಧಾನಸಭೆ ಪ್ರಚಾರಕ್ಕಾಗಿ ಚಿಕ್ಕಮಗಳೂರಿಗೆ ಶನಿವಾರ ಆಗಮಿಸಿದ ಅವರು, "ಎಲ್ಲರಿಗೂ ನಮಸ್ಕಾರ" ಎಂದು ಕನ್ನಡ ಹೇಳುವ ಮೂಲಕ ಭಾಷಣ ಆರಂಭಿಸಿದರು. ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದ ದುರಾಡಳಿತ ತೊಗಿಲಸಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಕೋರಿದರು.
ಉದ್ಯೋಗ ಸೃಷ್ಠಿ, ಕೃಷಿಕರಿಗೆ ಪ್ರೋತ್ಸಾಹ, ಯುವಕರಿಗೆ ಆದ್ಯತೆ ಕಾಂಗ್ರೆಸ್ ಪಕ್ಷದ ಧ್ಯೇಯಗಳಾಗಿವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವುದಾಗಿ ಅವರು ತಿಳಿಸಿದರು.
ಕೇಂದ್ರ ಯುಪಿಎ ಸರ್ಕಾರ ರೈತರಿಗೆ ಸಹಾಯ ಮಾಡಲು ಹಲವಾರು ಯೋಜನೆಗಳನ್ನು ಪ್ರಕಟಿಸಿತು ಆದರೆ, ರಾಜ್ಯ ರೈತರ ಹಿತ ಮರೆತ ರಾಜ್ಯ ಬಿಜೆಪಿ ಸರ್ಕಾರ ಅವುಗಳನ್ನು ಜಾರಿಗೆ ತರಲು ಆಸಕ್ತಿ ತೋರಲಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದರು.
ರಾಜ್ಯದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಇಂತಹ ಸರ್ಕಾರ ನಮಗೆ ಬೇಡ ರಾಜ್ಯದ ಅಭಿವೃದ್ಧಿ ಮಾಡುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಕರೆ ನೀಡಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications