ಸೂರ್ಯ-ಚಂದ್ರರ ಮೇಲಾಣೆ ನಾನೇ ಸಿಎಂ : ಬಿಎಸ್ವೈ

.Yeddyurappa.
ಬೆಂಗಳೂರು, ಏ. 29 : "ವಿಧಾನಸಭೆ ಚುಣಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ ಆರವತ್ತು ಸ್ಥಾನಗಳನ್ನು ಗಳಿಸಿ, ಸರ್ಕಾರ ರಚನೆಯಲ್ಲಿ ಪಕ್ಷ ಪ್ರಮುಖ ಪಾತ್ರ ವಹಿಸಲಿದೆ. ನಾನು ಮುಖ್ಯಮಂತ್ರಿ ಆಗುವುದು ಸೂರ್ಯ ಚಂದ್ರರ ಆಣೆಗೂ ಸತ್ಯ" ಎಂದು ಮಾಜಿ ಮುಖ್ಯಮಂತ್ರಿ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಪ್ರಚಾರ ಕಾರ್ಯ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಎಲ್ಲಾ ಸಭೆಗಳಲ್ಲೂ ನನ್ನ ಹೆಸರು ಹೇಳಿ ಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಲಾಭವಾಗಲಿದೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಕೆಜೆಪಿ 60 ಸ್ಥಾನಗಳನ್ನು ಪಡೆಯಲಿದೆ. ಸರ್ಕಾರ ರಚನೆಯಲ್ಲಿ ಕೆಜೆಪಿಯೇ ಪ್ರಮುಖ ಪಾತ್ರ ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೆ. ಕೆಜೆಪಿ ಪರವಾಗಿ ಜನರು ಮತನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

40 ಸ್ಥಾನ ಬರೋಲ್ಲ : ಯಾವ ರಾಷ್ಟ್ರೀಯ ನಾಯಕರನ್ನು ಕರೆಸಿ ಬಿಜೆಪಿ ಪ್ರಚಾರ ನಡೆಸಿದರೂ 40 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲು ಸ್ಥಾನಗಳಲ್ಲಿ ಗೆಲುವು ಸಾಧಿಸುವುದಿಲ್ಲ ಎಂದು ಅವರು ಭವಿಷ್ಯ ನುಡಿದರು.

ಬಿಜೆಪಿಗೆ ಮತ್ತೆ ಹೋಗೋಲ್ಲ : ಯಾವ ನಾಯಕರು ಆಹ್ವಾನ ನೀಡಿದರೂ ನಾನು ಪುನಃ ಬಿಜೆಪಿಗೆ ಪಕ್ಷಕ್ಕೆ ಮರಳುವುದಿಲ್ಲ. ಬಿಜೆಪಿ ನಾಯಕರು ನಾನು ಪಕ್ಷಕ್ಕೆ ಮರಳುತ್ತೇನೆ ಎಂದು ಜನರಲ್ಲಿ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ದೂರಿದರು.

ಚೀಟಿ ವಿವಾದ ಬಗೆಹರಿಸಿ : ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ಚೀಟಿ ವ್ಯವಹಾರದ ಕುರಿತು ಸರ್ಕಾರ ತನಿಖೆಗೆ ಆದೇಶಿಸಬೇಕೆಂದು ಅವರು ಆಗ್ರಹಿಸಿದರು. ಮುಖ್ಯಮಂತ್ರಿ ಆಗಿದ್ದು, ಇಂತಹ ವ್ಯವಹಾರ ನಡೆಸಿರುವುದು ಸಾಬೀತಾಗಿದೆ. ಆದರೂ ಸರ್ಕಾರ ಏಕೆ ಮೌನ ವಹಿಸಿದೆ ಎಂದು ಅವರು ಪ್ರಶ್ನಿಸಿದರು.

ತೃತೀಯ ರಂಗ ಕಟ್ಟುತ್ಥೇನೆ : ಚುನಾವಣೆ ಬಳಿಕ ರಾಜ್ಯದಲ್ಲಿ ತೃತೀಯ ರಂಗದ ಸ್ಥಾಪನೆ ಮಾಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು. ಲೋಕಸಭೆ ಚುನಾವಣೆ ವೇಳೆಗೆ ರಾಜ್ಯದಲ್ಲಿ ತೃತೀಯ ರಂಗದ ಸ್ಥಾಪನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ- ಕೆಜೆಪಿ ಕಾರ್ಯಕರ್ತರ ಮಾರಾಮಾರಿ : ದೇಮದುರ್ಗದಲ್ಲಿ ಬಿಜೆಪಿ ಮತ್ತು ಕೆಜೆಪಿ ಕಾರ್ಯಕರ್ತರು ಪೊಲೀಸರು ಎದುರೇ ಬಡಿದಾಡಿಕೊಂಡಿದ್ದಾರೆ. ಲಘು ಲಾಠಿ ಪ್ರಹಾರ ಮಾಡಿ ಪೊಲೀಸರು ಗುಂಪನ್ನು ಚದುರಿಸಿದ್ದಾರೆ. ಹೋಂ ಗಾರ್ಡ್ ಗಳಿಗೆ ಶಾಸಕ ಶಿವನಗೌಡ ನಾಯಕ್ ಬೆಂಬಲಿಗರು ಹಣ ನೀಡುತ್ತಿದ್ದಾಗ, ಅಲ್ಲಿಗೆ ಆಗಮಿಸಿದ ಕೆಜೆಪಿ ಕಾರ್ಯಕರ್ತರು ಅವರೊಂದಿಗೆ ಘರ್ಷಣೆಗೆ ಇಳಿಸಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+