ಹೀಗಿರಬೇಕಿತ್ತು ನಮ್ಮ ಪಕ್ಷಗಳ ಚುನಾವಣಾ ಪ್ರಣಾಳಿಕೆ!

ನಾಡಿಗೆ ಬೇಕಿರುವುದು!
ಕಡ್ಡಾಯ ಕನ್ನಡ : ಕನ್ನಡನಾಡಿನ ಏಳಿಗೆಗೆ ಆಗಬೇಕಾದ ಮಹತ್ವವಾದ ಅನೇಕ ವಿಷಯಗಳಲ್ಲಿ ಕೆಲವನ್ನು ಇಲ್ಲಿ ಕೊಡಲಾಗಿದೆ ನೋಡಿ. ಕನ್ನಡ ಮಾಧ್ಯಮದಲ್ಲಿನ ಕಲಿಕೆಯನ್ನು ಜಗತ್ತಿನ ಅತ್ಯುತ್ತಮ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಏನೇನೆಲ್ಲಾ ಆಗಬೇಕೋ ಅದೆಲ್ಲವನ್ನೂ ಮಾಡಬೇಕು. ಯಾವ ಕಡ್ಡಾಯ ಮಾಧ್ಯಮ ಕಲಿಕೆಯೂ ಇಲ್ಲಿರುವುದಿಲ್ಲ. ಆದರೆ ಜನರಿಗೆ ತಾಯ್ನುಡಿ ಕಲಿಕೆಯ ಮಹತ್ವವನ್ನು ತಾವೇ ಕಣ್ಣಾರೆ ಕಾಣುವಂತಹ ದೂರದೃಷ್ಟಿಯನ್ನು ಹೊಂದಿರುವ ವ್ಯವಸ್ಥೆಯನ್ನು ಕಟ್ಟಬೇಕು. ಪ್ರಪಂಚದ ಎಲ್ಲಾ ಬಗೆಯ ಜ್ಞಾನ ವಿಜ್ಞಾನವನ್ನು ಕನ್ನಡಕ್ಕೆ ತರುವ ಕೆಲಸವನ್ನು ಶುರುಮಾಡಬೇಕು. ಇದಕ್ಕೆ ಬೇಕಾದ ಗಡುವಿನೊಳಗೆ ಪೂರೈಸುವ ಕಾರ್ಯಯೋಜನೆಗಳನ್ನು ರೂಪಿಸಬೇಕು. ಇದಕ್ಕೆ ಬೇಕಿರುವ ಸಂಪನ್ಮೂಲಗಳನ್ನು ಹೊಂದಿಸತಕ್ಕದ್ದು.
ಕರ್ನಾಟಕದ ಆಡಳಿತ ಭಾಷೆಯಾಗಿ ಕನ್ನಡವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಬೇಕು. ಇಲ್ಲಿನ ಎಲ್ಲಾ ಸಾರ್ವಜನಿಕ ಕಚೇರಿಗಳಲ್ಲೂ ಕನ್ನಡದಲ್ಲಿ ಸೇವೆ ನೀಡುವುದು ಕಡ್ಡಾಯ. ಈ ನೆಲದಲ್ಲಿ ನೆಲೆಗೊಳ್ಳುವ ಯಾವುದೇ ಸಾರ್ವಜನಿಕ ಬಳಕೆಯ/ ಉಪಯುಕ್ತತೆಯ ಉದ್ದೇಶದ ಸಂಸ್ಥೆಗಳು ಕನ್ನಡದಲ್ಲಿ ವ್ಯವಹರಿಸತಕ್ಕದ್ದು.
ನೀರಿನ ಸದುಪಯೋಗ : ಈ ನಾಡಿಗಾಗಿ ಸಮಗ್ರವಾದ ನೀರಾವರಿ ಯೋಜನೆಗಳನ್ನು ರೂಪಿಸಿ ಗೊತ್ತುಮಾಡಿದ ಕಾಲಮಿತಿಯೊಳಗೆ ಜಾರಿಮಾಡತಕ್ಕದ್ದು. ರಾಜ್ಯದ ಒಳಗಿನ ಎಲ್ಲಾ ನದಿಗಳ ನೀರನ್ನು ಸದುಪಯೋಗ ಮಾಡಿಕೊಳ್ಳಲು, ನಮ್ಮ ನೆಲದ ಮೇಲೆ ಬೀಳುವ ಮಳೆಯ ಪ್ರತಿಯೊಂದು ನೀರಹನಿಯನ್ನೂ ವ್ಯರ್ಥವಾಗದಂತೆ ಸಂಗ್ರಹಿಸುವ ಹತ್ತಾರು ಯೋಜನೆಗಳನ್ನು ರೂಪಿಸಿ ಜಾರಿಮಾಡುವುದು. ವ್ಯವಸಾಯ, ಕೈಗಾರಿಕೆ, ಉದ್ದಿಮೆಗಾರಿಕೆಯೇ ಮೊದಲಾದ ದುಡಿಮೆಯ ಪ್ರತಿಯೊಂದು ಕ್ಷೇತ್ರದಲ್ಲಿಯೂ ಜಗತ್ತಿನ ಉತ್ಕೃಷ್ಟ ಕಾರ್ಯವಿಧಾನಕ್ಕೆ ಸಾಟಿಯಾಗಬಲ್ಲ ತರಬೇತಿ, ಸಂಶೋಧನೆಯಂತಹ ಮೂಲಭೂತ ಕೆಲಸಗಳು ನಡೆಯಲು ಏರ್ಪಾಟು ಮಾಡುವುದು.
ಉದ್ಯೋಗಾವಕಾಶ : ನಾಡಿನ ಒಳಗಿನ ಪ್ರತಿನಗರಗಳ ನಡುವಿನ ರಸ್ತೆ ರೈಲು ವಿಮಾನ ಸಂಪರ್ಕಗಳನ್ನು ಅತ್ಯುತ್ತಮಗೊಳಿಸುವುದು. ಎಲ್ಲಾ ರಸ್ತೆಗಳನ್ನೂ ಆರ್ಥಿಕ ಬೆಳವಣಿಗೆಗೆ ಹೆದ್ದಾರಿಗಳಂತೆ ರೂಪಿಸುವುದು. ಇಡೀ ನಾಡಿನ ಬೇರೆ ಬೇರೆ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಹುಟ್ಟಿಸುವ ಉದ್ದಿಮೆಗಳನ್ನು ಸ್ಥಾಪಿಸಲು ಉತ್ತೇಜಿಸುವ ನೀತಿಯನ್ನು ರೂಪಿಸತಕ್ಕದ್ದು. ಯಾವುದೇ ಕಲಿಕೆಯನ್ನು ಮಾಡಿದವನಿಗೂ ತನ್ನ ಜಿಲ್ಲೆಯ ವ್ಯಾಪ್ತಿಯೊಳಗೇ ಅದಕ್ಕೆ ತಕ್ಕಂತಹ ಉದ್ಯೋಗಾವಕಾಶ ಇರುವಂತಹ ವ್ಯವಸ್ಥೆಯನ್ನು ಕಟ್ಟುವುದು. ಹೊಸದಾಗಿ ಉದ್ದಿಮೆ ಸ್ಥಾಪಿಸುವವರಿಗೆ ಅನುಕೂಲಕರವಾದ ನೀತಿಗಳನ್ನು ರೂಪಿಸುವುದು. ರಾಜ್ಯದ ವಿದ್ಯುತ್ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆಯನ್ನು ಮಾಡಲು ಅನುವಾಗುವಂತೆ ನಾನಾ ಯೋಜನೆಗಳನ್ನು ಉತ್ಪಾದನಾ ಸಾಮರ್ಥ್ಯಗಳನ್ನು ಹೆಚ್ಚಿಸುವುದು. ಇಡೀ ರಾಜ್ಯಕ್ಕೆ ಸದಾಕಾಲ ಗುಣಮಟ್ಟದ ವಿದ್ಯುತ್ ಪೂರೈಸಲು ಬೇಕಾದ ಯೋಜನೆಗಳನ್ನು ರೂಪಿಸುವತ್ತಾ ದಾಪುಗಾಲಿಡುವುದು.
ಆಡಳಿತ ಭಾಷೆಯಾಗಿ ಕನ್ನಡ : ಕೇಂದ್ರವು "ಭಾರತದ ದೇಶದ ಇಂದಿನ ಹುಳುಕಿನ ಭಾಷಾನೀತಿಯನ್ನು ಕೈಬಿಡತಕ್ಕದ್ದು. ಭಾರತದ ಆಡಳಿತ ಭಾಷೆಯಾಗಿ ಕನ್ನಡವನ್ನೂ ಪರಿಗಣಿಸತಕ್ಕದ್ದು. ಕನ್ನಡನಾಡಿನಲ್ಲಿ ತ್ರಿಭಾಷಾ ಸೂತ್ರವನ್ನು ಕಿತ್ತೊಗೆಯತಕ್ಕದ್ದು. ಅಂತಾರಾಜ್ಯ ವಲಸೆ ನಿಯಂತ್ರಣಕ್ಕೆ ಬಿಗಿನೀತಿಯನ್ನು ರೂಪಿಸತಕ್ಕದ್ದು" ಎಂಬ ನಿಟ್ಟಿನಲ್ಲಿ ಒತ್ತಾಯಿಸತಕ್ಕದ್ದು. ಆರ್ಥಿಕ ಮತ್ತು ರಾಜಕೀಯ ಅಧಿಕಾರಗಳ ವಿಕೇಂದ್ರಿಕರಣಕ್ಕಾಗಿ ಕೇಂದ್ರವನ್ನು ಒತ್ತಾಯಿಸುವುದು. ಆಡಳಿತ ಪಟ್ಟಿಯನ್ನು ಮರು ರೂಪಿಸಿ ರಾಜ್ಯಗಳಿಗೆ ಹೆಚ್ಚಿನ ಅಧಿಕಾರಗಳನ್ನು ದಕ್ಕಿಸಿಕೊಳ್ಳುವುದು. ಕರ್ನಾಟಕದಲ್ಲಿ ಭಾರತ ಸರ್ಕಾರ ಪ್ರಣೀತ ಕುಟುಂಬ ಯೋಜನೆಗೆ ವಿದಾಯ ಹೇಳತಕ್ಕದ್ದು. ನಮ್ಮ ನಾಡಿನ ಜನಸಂಖ್ಯೆ, ಜನದಟ್ಟಣೆ ಮತ್ತು ಹೆರುವೆಣಿಕೆಗಳನ್ನು (Target TFR) ನಾವೇ ತೀರ್ಮಾನಿಸತಕ್ಕದ್ದು.
ಕೊನೆಹನಿ : ಇವಿಷ್ಟನ್ನು ಮಾತ್ರವೇ ನಾವು ಜನಪರ ಎನ್ನುತ್ತಿಲ್ಲಾ. ಅಗ್ಗದ ಜನಪ್ರಿಯ ಯೋಜನೆಗಳನ್ನು ಒಮ್ಮೆಗೇ ಕೈಬಿಟ್ಟುಬಿಡಬೇಕು ಎನ್ನುತ್ತಿಲ್ಲಾ. ಭ್ರಷ್ಟಾಚಾರ ನಿಯಂತ್ರಣ ಮತ್ತು ಉತ್ತಮ ಆಡಳಿತಗಳ ಅಗತ್ಯವಿಲ್ಲಾ ಎನ್ನುತ್ತಿಲ್ಲಾ. ಅವೆಲ್ಲಾ ಬೇಕು. ಜೊತೆಯಲ್ಲಿ ದೀರ್ಘಾವಧಿ ಮತ್ತು ಶಾಶ್ವತವಾಗುವಂತಹ ಯೋಜನೆಗಳನ್ನು ರೂಪಿಸುವತ್ತ ನಮ್ಮ ರಾಜಕೀಯ ಪಕ್ಷಗಳು ಯೋಚಿಸಲಿ ಎನ್ನುತ್ತಿದ್ದೇವೆ. ಇಂಥದ್ದೊಂದು ನಮ್ಮ ನಾಡಿಗೆ ಬೇಕು ಎನ್ನುವುದನ್ನು ಮತದಾರರು ಬಯಸುತ್ತಿದ್ದಾರೆ ಎಂದು ಹೇಳುತ್ತಿದ್ದೇನೆ. ಅಷ್ಟೇ!
ಪ್ರಣಾಳಿಕೆಗಳು : ಜೆಡಿಎಸ್ | ಬಿಜೆಪಿ | ಕಾಂಗ್ರೆಸ್ | ಕೆಜೆಪಿ | ಬಿಎಸ್ಆರ್ ಕಾಂ | ವಾಟಾಳ್ ಪಕ್ಷ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications