ಅಭ್ಯರ್ಥಿಯ ವಿಧಿವಶ: ಚುನಾವಣೆ ಮುಂದೂಡಿಕೆ

bjp-piriyapatna-sannamoge-gowda-death-election-postpone
ಮೈಸೂರು, ಏ.30: ಜಿಲ್ಲೆಯ ಪಿರಿಯಾಪಟ್ಟಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಣ್ಣಮೊಗೆ ಗೌಡ (57) ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಮಂಗಳವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಉಪ್ಪಾರ ಸಮಾಜಕ್ಕೆ ಸೇರಿದ ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಜನಸಂಘದ ಕಾಲದಿಂದಲೂ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಲಾಗಿತ್ತು.

ಇದರಿಂದ ಕ್ಷೇತ್ರದಲ್ಲಿ ಮೇ 5ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ. ಸದ್ಯದಲ್ಲೇ ಹೊಸದಾಗಿ ಚುನಾವಣೆ ಅಧಿಸೂಚನೆ ಪ್ರಕಟಿಸಿದ ಬಳಿಕ ನೂತನ ಚುನಾವಣೆ ದಿನಾಂಕ ಪ್ರಕಟವಾಗಲಿದೆ.

ಮಾನ್ಯತೆ ಪಡೆದ 7 ಪಕ್ಷಗಳು: ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್, ಸಿಪಿಐ, ಸಿಪಿಎಂ, ಬಿಎಸ್ ಪಿ ಮತ್ತು ಎನ್ ಸಿಪಿ ಮಾತ್ರ ಮಾನ್ಯತೆ ಪಡೆದ ಪಕ್ಷಗಳು.

ಚುನಾವಣೆ ಪ್ರಚಾರ ಮುಗಿಸಿ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿರುವ ಮನೆಗೆ ಬಂದ ಸಣ್ಣಮೊಗೆ ಗೌಡರು ಶೌಚಾಲಯಕ್ಕೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಬಹಳ ಹೊತ್ತು ಹೊರಕ್ಕೆ ಬಾರದೇ ಇದ್ದಾಗ ಬಾಗಿಲು ಒಡೆದು ಅವರು ಕುಸಿದುಬಿದ್ದಿರುವುದು ಕಂಡುಬಂದಿದೆ. ತಕ್ಷಣ ಅವರನ್ನು ಪಿರಿಯಾಪಟ್ಟಣ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಸಣ್ಣಮೊಗೆ ಗೌಡ ಅವರು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾಗಿದ್ದು, ಅವರ ನಿಧನದ ಕಾರಣ ಚುನಾವಣೆ ಮುಂದೂಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸಿ ಶಿಖಾ ತಿಳಿಸಿದ್ಧಾರೆ.

ಮತ್ತೊಬ್ಬ ಅಭ್ಯರ್ಥಿ ಸಾವು
: ಕಳೆದ ವಾರ ಬಿಜಾಪುರ ಜಿಲ್ಲೆ ಸಿಂಧಗಿ ಕ್ಷೇತ್ರದ ಜೆಡಿಯು ಅಭ್ಯರ್ಥಿ ದ್ಯಾವಪ್ಪ ಗೌಡ ಗುರುಲಿಂಗಪ್ಪ ಪಾಟೀಲ್ ಅವರು ತೀವ್ರ ಹೃಯಾಘಾತದಿಂದ ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ ಜೆಡಿಯು ಪಕ್ಷ ರಾಷ್ಟ್ರೀಯ ಮಾನ್ಯತೆ ಪಡೆಯದ ಪಕ್ಷವಾದ್ದರಿಂದ ಆ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಿಲ್ಲ. ಹಾಗಾಗಿ ಮೇ 5ರಂದು ಸಿಂಧಗಿ ಕ್ಷೇತ್ರದಲ್ಲಿ ಪೂರ್ವನಿಗದಿಯಂತೆ ಚುನಾವಾಣೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+