ಕೆಎಸ್ ಈಶ್ವರಪ್ಪಾ ಹೆಲಿಕಾಪ್ಟರಿನಲ್ಲಿ ಅಕ್ರಮ ಹಣ ಸಿಕ್ತು

ಪರಿಸ್ಥಿತಿ ಹೀಗಿರುವಾಗ ಇಂದು ಬೆಳಗ್ಗೆ ರಾಜ್ಯದ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಯಾದಗಿರಿ ಜಿಲ್ಲೆಯ ಗುರಮಠ್ಕಲ್ ಕ್ಷೇತ್ರದತ್ತ ಹೆಲಿಕಾಪ್ಟರಿನಲ್ಲಿ ಹಾರಿಹೋಗುತ್ತಿದ್ದಾರೆಂದು ಮಾಹಿತಿ ಪಡೆದ ಚುನಾವಣಾ ಅಧಿಕಾರಿಗಳು ತಕ್ಷಣ ಆ ಹೆಲಿಕಾಪ್ಟರ್ ಭೂಮಿಯ ಮೇಲೆ ಇಳಿಯುವುದನ್ನೇ ಕಾಯುತ್ತಿದ್ದು ತಪಾಸಣೆ ನಡೆಸಿದ್ದಾರೆ.
ಜಿಲ್ಲೆಯ ಗುರುಮಟ್ಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಿರೀಶ್ ಮಟ್ಟಣ್ಣವರ್ ಪರ ಪ್ರಚಾರ ಮಾಡಲು ಈಶ್ವರಪ್ಪ ಅವರು ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಈ ವೇಳೆ ಹೆಲಿಕಾಪ್ಟರಿನಲ್ಲಿ ಭಾರಿ ಪ್ರಮಾಣದ ಮೊತ್ತ ಪತ್ತೆಯಾಗಿದೆ. ಆದರೆ ಅಷ್ಟು ಮೊತ್ತಕ್ಕೆ ಯಾವುದೇ ಸಮರ್ಪಕ ದಾಖಲೆಗಳು ಇಲ್ಲವಾದ ಕಾರಣ ಅದು ಅಕ್ರಮ ಹಣವೆಂದು ಪರಿಗಣಿಸಿದ ಅಧಿಕಾರಿಗಳು ಅಷ್ಟೂ ಮೊತ್ತವನ್ನು ಜಪ್ತಿ ಮಾಡಿ, ವಶಪಡಿಸಿಕೊಂಡಿದ್ದಾರೆ.
ಅಂದಹಾಗೆ, ಹಾಗೆ ಅಕ್ರಮವಾಗಿ ಈಶ್ವರಪ್ಪ ಅವರು ಸಾಗಿಸುತ್ತಿದ್ದ ಒಟ್ಟು ಮೊತ್ತ 61,400 ರೂಪಾಯಿ. ಈಶ್ವರಪ್ಪ ವಿರುದ್ಧ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಪಾಸಣೆ ನಂತರ, ಈಶ್ವರಪ್ಪ ಅವರು ರಾಯಚೂರಿನತ್ತ ಪ್ರಯಾಣ ಬೆಳೆಸಿದರು.
ಗಂಗಾವತಿಯಲ್ಲೂ: ಇಲ್ಲಿನ ಎಪಿಎಂಸಿ ಸದಸ್ಯರೊಬ್ಬರೊಬ್ಬರು ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1.6 ಲಕ್ಷ ರೂ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ಮದ್ಯದ ಹೊಳೆ: 2 ಲಾರಿಗಳಲ್ಲಿ ನಗರದತ್ತ ಸಾಗಿಸುತ್ತಿದ್ದ ಸುಮಾರು 20 ಲಕ್ಷ ರೂ. ಮೌಲ್ಯದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಾರಿಗಳನ್ನೂ ವಶಪಡಿಸಿಕೊಂಡಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications