ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 1 ಮತ್ತು 2 ರಂದು ಸಿಇಟಿ ಪರೀಕ್ಷೆ

|
Google Oneindia Kannada News

CET 2013
ಬೆಂಗಳೂರು, ಏ. 30 : ವಿಧಾನಸಭೆ ಚುನಾವಣೆ ಎದುರಾಗಿರುವುದರಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಐಟಿ) ಮುಂದೂಡಬಹುದು ಎಂಬ ಗೊಂದಲಗಳಿಗೆ ತೆರೆಬಿದ್ದಿದೆ. ಸಿಇಟಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ ನಾಳೆಯಿಂದ ಪರೀಕ್ಷೆ ಪ್ರಾರಂಭವಾಗಲಿದೆ.

ಚುನಾವಣೆ ಕಾರಣದಿಂದ ಮೇ 1, 2 ಮತ್ತು 3ರಂದು ನಡೆಯುವ ಸಿಇಟಿ ಪರೀಕ್ಷೆ ಮುಂದೂಡಲಾಗುತ್ತದೆ ಎಂಬ ಸುದ್ದಿಯನ್ನು ನಿರಾಕರಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದೆ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮೇ1 ಬುಧವಾರ ಮತ್ತು ಮೇ 2ರ ಗುರುವಾರ 287 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 1.39 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಇಲಾಖೆ ತಿಳಿಸಿದೆ. ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಮೇ 3ರಂದು ಪರೀಕ್ಷೇ ನಡೆಯಲಿದೆ.

ಪರೀಕ್ಷೆ ಪ್ರಕ್ರಿಯೆಗಾಗಿ 287 ವೀಕ್ಷಕರು, 574 ವಿಶೇಷ ಜಾಗೃತ ದಳದ ಸದಸ್ಯರು ಹಾಗೂ 8750 ಪರಿವೀಕ್ಷಕರನ್ನು ಇಲಾಖೆ ನೇಮಿಸಿದೆ. ಪರೀಕ್ಷೆಗೂ ಅರ್ಧ ಗಂಟೆ ಮುಂಚೆ ಕೇಂದ್ರದಲ್ಲಿ ಹಾಜರಿರಬೇಕು.

ಪರೀಕ್ಷೆ ಆರಂಭವಾದ ಹತ್ತು ನಿಮಿಷದ ಬಳಿಕ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಪರೀಕ್ಷಾರ್ಥಿಗಳಿಗೆ ಸೂಚನೆ ನೀಡಲಾಗಿದೆ.(ಸಿಇಟಿ ಪರೀಕ್ಷಾ ವೇಳಾಪಟ್ಟಿ)

ಮೇ 7 ಮತ್ತು 9 ರಂದು ಫಲಿತಾಂಶ : ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವು ಕ್ರಮವಾಗಿ ಮೇ 7 ಮತ್ತು ಮೇ 9ರಂದು ಪ್ರಕಟವಾಗುವ ಸಾಧ್ಯತೆಯಿದೆ. ಫಲಿತಾಂಶ ಪ್ರಕಟಣೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಪ್ರೌಢ ಶಿಕ್ಷಣ ಮಂಡಳಿ ತಯಾರಿ ನಡೆಸುತ್ತಿದೆ.

ಚುನಾವಣೆ ಪ್ರಕ್ರಿಯೆ ಇರುವುದರಿಂದ ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಗುತ್ತಿಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಏಪ್ರಿಲ್ ತಿಂಗಳ 3ನೇ ವಾರದಲ್ಲಿಯೇ ಮೌಲ್ಯಮಾಪನ ಕಾರ್ಯ ಮುಗಿದಿದೆ. ಚುನಾವಣೆ ಮುಗಿದ ನಂತರ ಫಲಿತಾಂಶ ಪ್ರಕಟಿಸಲು ಇಲಾಖೆ ಸಿದ್ಧತೆ ನಡೆಸುತ್ತಿದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
Karnataka Examinations Authority (KEA), announced that Common Entrance Test (CET 2013) Examinations will start from May 1. The test will be held in May 1, 2 and 03.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X