ಬೆಂಗಳೂರು : 267 ಬೂತ್ ಗಳಲ್ಲಿ ಸಿಸಿಟಿವಿ

Police
ಬೆಂಗಳೂರು, ಮೇ 2 : ನಗರದಲ್ಲಿ 276 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಆ ಪ್ರದೇಶಗಳಲ್ಲಿ ಅರೆಸೇನಾ ಪಡೆ ಸಿಬ್ಬಂದಿ ನಿಯೋಜಿಸಲಾಗುವುದು ಹಾಗೂ ಸಿಸಿಟಿವಿ ಆಳವಡಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಕೈಗೊಂಡಿರುವ ಪೊಲೀಸ್ ಬಂದೋಬಸ್ತ್ ಬಗ್ಗೆ ಮಾಹಿತಿ ನೀಡಿದ ಅವರು, ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಾಕಷ್ಟು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮುಂಜಾಗ್ರತೆ ಕ್ರಮವಾಗಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು ಹಾಗೂ ರೌಡಿಗಳನ್ನು ವಶಕ್ಕೆ ತೆಗೆದುಕೊಂಡು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.

ಒಟ್ಟು ಮತಗಟ್ಟೆಗಳು : ನಗರದಲ್ಲಿ ಸುಮಾರು 6,200 ಮತಗಟ್ಟೆಗಳಿವೆ. ಅವುಗಳಲ್ಲಿ ಎರಡೂವರೆ ಸಾವಿರ ಅತಿ ಸೂಕ್ಷ್ಮ ಮತ್ತು ಎರಡು ಸಾವಿರ ಸೂಕ್ಷ್ಮ ಮತಗಟ್ಟೆಗಳಾಗಿವೆ.

ದೊಂಬಿ ಅಥವಾ ಘರ್ಷಣೆ ಸಂಭವಿಸುವ ಸಾಧ್ಯತೆ ಇರುವಂತಹ 276 ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ್ದೇವೆ. ಈ ಪ್ರದೇಶದಲ್ಲಿ ಅರೆಸೇನಾ ಪಡೆ ಸಿಬ್ಬಂದಿ ಪಥಸಂಚಲನ ನಡೆಸಿದ್ದಾರೆ. ಮತದಾನದ ದಿನ ಅವರು ಆ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಸಿಸಿಟಿವಿ ಕಾವಲು : ಚುನಾವಣಾ ಅಕ್ರಮಗಳನ್ನು ತಡೆಯುವ ಉದ್ದೇಶಕ್ಕಾಗಿ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ 267 ಸಿಸಿ ಟಿವಿ ಕ್ಯಾಮೆರಾ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಪ್ರಮುಖ ಟ್ರಾಫಿಕ್ ಜಂಕ್ಷನ್‌ಗಳು ಮತ್ತು ವೃತ್ತಗಳಲ್ಲಿನ ಕ್ಯಾಮೆರಾಗಳ ನೆರವನ್ನು ಪಡೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಪೊಲೀಸರು : ನಗರದ 18 ಸಾವಿರ ಪೊಲೀಸರು, ಹೈದರಾಬಾದ್ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಹಂತದಲ್ಲಿರುವ ರಾಜ್ಯದ 20 ಐಪಿಎಸ್ ಅಧಿಕಾರಿಗಳು, ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಅರೆಸೇನಾ ಪಡೆಯ 35 ತುಕಡಿ.

ರಾಜ್ಯ ಮೀಸಲು ಪೊಲೀಸ್ ಪಡೆಯ 40 ತುಕಡಿ ಹಾಗೂ ನಗರ ಸಶಸ್ತ್ರ ಮೀಸಲು ಪೊಲೀಸ್ (ಸಿಎಆರ್) ಪಡೆಯ ಮೂರು ಸಾವಿರ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ.

ಜವಾಬ್ದಾರಿ : ಎಸಿಪಿ ದರ್ಜೆಯ ಅಧಿಕಾರಿಗೆ ಪ್ರತಿ ವಿಧಾನಸಭಾ ಕ್ಷೇತ್ರದ ಭದ್ರತೆಯ ಜವಾಬ್ದಾರಿ ವಹಿಸಲಾಗಿದೆ. ಅದೇ ರೀತಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬ ಡಿಸಿಪಿ ದರ್ಜೆಯ ಅಧಿಕಾರಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದರು.

ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮತಯಂತ್ರಗಳನ್ನು ಸಂಗ್ರಹಿಸಿಡುವ ಭದ್ರತಾ ಕೊಠಡಿಗಳ (ಸ್ಟ್ರಾಂಗ್ ರೂಂ) ಬಳಿ ಮೂರು ಹಂತದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ.

ಅರೆಸೇನಾ ಪಡೆ ಸಿಬ್ಬಂದಿ ಭದ್ರತಾ ಕೊಠಡಿಗಳ ಸಮೀಪ, ಸಿಎಆರ್ ಸಿಬ್ಬಂದಿ ಭದ್ರತಾ ಕೊಠಡಿ ಇರುವ ಕಟ್ಟಡದ ಬಳಿ ಹಾಗೂ ಸಿವಿಲ್ ಪೊಲೀಸರು ಆ ಕಟ್ಟಡದ ಸುತ್ತಮುತ್ತ ಭದ್ರತಾ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+