ಚುನಾವಣೆ ಸೋಲು: ಬಿಜೆಪಿ ಶಾಸಕನ ಪುತ್ರ ಆತ್ಮಹತ್ಯೆ

37 ವರ್ಷ ವಯಸ್ಸಿನ ನಿಖಿಲ್ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಮೇಲ್ಮನೆ ಚುನಾವಣೆಯಲ್ಲಿ ಸೋತ ಬಳಿಕ ನಿಖಿಲ್ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಜತೆಗೆ ಸುಮಾರು ಒಂದು ವರ್ಷದಿಂದ ಅವರ ಆರೋಗ್ಯ ಸರಿಯಾಗಿರಲಿಲ್ಲ ಎನ್ನಲಾಗಿದೆ.
2009ರಲ್ಲಿ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸಿ, ನಿಖಿಲ್ ಸೋತಿದ್ದರು. ನಿಖಿಲ್ ಆತ್ಮಹತ್ಯೆ ಮಾಡಿಕೊಂಡಾಗ ಅವರ ತಂದೆ ಮನೆಯಲ್ಲಿರಲಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿಖಿಲ್ ಬುಧವಾರ ಬೆಳಗಿನ ಜಾವ ರಿವಾಲ್ವರಿನಿಂದ ತನ್ನ ತಲೆಗೆ ತಾನೇ ಗುಂಡಿಕ್ಕಿಕೊಂಡಿದ್ದಾರೆ. ಅವರನ್ನು ತಕ್ಷಣವೇ ವಿಮಾನದಲ್ಲಿ ಆಸ್ಪತ್ರೆಗೆ ಸಾಗಿಸಸಲಾಯಿತು. ಆದರೆ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ಜಲಗಾಂವ್ ಗ್ರಾಮಾಂತರ ಪೊಲೀಸ್ ಅಧೀಕ್ಷಕ ಎಸ್. ಕುಮಾರ್ ಅವರು ತಿಳಿಸಿದ್ದಾರೆ.












Click it and Unblock the Notifications