• search

ಭ್ರಷ್ಟರ ಅಕ್ರಮ ಆಸ್ತಿ ಸರ್ಕಾರದ ಖಜಾನೆ ಸೇರಲಿದೆ

Subscribe to Oneindia Kannada
For Quick Alerts
ALLOW NOTIFICATIONS
For Daily Alerts
  Chidambaram
  ನವದೆಹಲಿ, ಮೇ 2 : ಭ್ರಷ್ಟ ಸರ್ಕಾರಿ ಅಧಿಕಾರಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಮತ್ತು ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯನ್ನು ನಿಗದಿತ ಕಾಲಮಿತಿಯಲ್ಲಿ ಅಂತ್ಯಗೊಳಿಸುವ ಮಹತ್ವದ ಕಾಯ್ದೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

  ಬುಧವಾರ ನವದೆಹಲಿಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಭ್ರಷ್ಟಾಚಾರ ನಿಗ್ರಹ ಕಾಯ್ದೆ, 1988ಕ್ಕೆ ತಿದ್ದುಪಡಿ ತರಲು ಒಪ್ಪಿಗೆ ದೊರಕಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದ್ದಾರೆ.

  ಕಾಯ್ದೆಯ ತಿದ್ದುಪಡಿಯಂತೆ, ಭ್ರಷ್ಟ ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿಯನ್ನು ಸರ್ಕಾರವೇ ವಶಪಡಿಸಿಕೊಳ್ಳಬಹುದು. ಇದು ಕೇವಲ ಸೇವೆಯಲ್ಲಿರುವ ಸರ್ಕಾರಿ ನೌಕರರಿಗಷ್ಟೇ ಮಾತ್ರವಲ್ಲ, ನಿವೃತ್ತ ನೌಕರರಿಗೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದರು.

  ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ಮಹತ್ವದ ತೀರ್ಮಾನವೂ ಇದರಲ್ಲಿ ಸೇರಿದೆ. ವಿಚಾರಣೆ ನಡೆಸುತ್ತಲೇ ಸಮಯ ವ್ಯರ್ಥ ಮಾಡುವುದನ್ನು ತಡೆಯಲು ಇಂತಹ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

  ಸಂಪುಟದ ಇತರ ತೀರ್ಮಾನಗಳು

  * ನೂತನವಾಗಿ ದೇಶದ 294 ನಗರಗಳಲ್ಲಿ ಎಫ್‌ಎಂ ಕೇಂದ್ರಗಳನ್ನು ಸ್ಥಾಪಿಸಲು ಅನುಮತಿ.
  * ವಿವಾಹ ಕಾನೂನು (ತಿದ್ದುಪಡಿ) ಮಸೂದೆಯನ್ನು ಉನ್ನತ ಸಚಿವರ ಸಮಿತಿಯ ಪರಿಶೀಲನೆಗೆ ಕಳುಹಿಸಲಾಗಿದೆ.
  * ಮಲಹೊರುವ ಪದ್ಧತಿ ನಿಷೇಧ ಮತ್ತು ಅವರ ಪುನರ್ವಸತಿ ವಿಧೇಯಕ 2012ಕ್ಕೆ ತಿದ್ದುಪಡಿ.
  * ನಗರಗಳ ಕಡುಬಡವರ ಆರೋಗ್ಯ ಸುಧಾರಣೆಗಾಗಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕಾರ‌್ಯಕ್ರಮ.
  * ಸಿಆರ್ ಪಿಎಫ್ ಸೇರಿದಂತೆ ಕೇಂದ್ರೀಯ ಪಡೆಗಳಿಗೆ 11 ಸಾವಿರ ಕೋಟಿ ವೆಚ್ಚದಲ್ಲಿ ಶಸ್ತ್ರಾಸ್ತ್ರ ಮತ್ತು ಸಲಕರಣೆ ಖರೀದಿ.

  ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  1988, to enable the authorities concerned to confiscate property illegally acquired by a corrupt public servant. said Finance Minister P Chidambaram after the meeting.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more