ಕೊನೆಯ ಹಂತದಲ್ಲಿ ಶಿಷ್ಯನ ಕೊಂಡಾಡಿದ ಕೃಷ್ಣ

'10 ವರ್ಷಗಳ ಹಿಂದೆ ನಾನು ಕನಕಪುರಕ್ಕೆ ಬಂದಾಗ ಶಿವಕುಮಾರ್ ಅವರನ್ನು ಗೆಲ್ಲಿಸಿಕೊಡುವಂತೆ ನಿಮ್ಮಲ್ಲಿ ಪ್ರಾರ್ಥಿಸಿದ್ದೆ. ನನಗೆ ಇವರನ್ನು ಗೆಲ್ಲಿಸಿಕೊಟ್ಟಿರಿ. ನಾನೂ ಸಹ ನಿಮಗೆ ಮಾತುಕೊಟ್ಟಂತೆ ಕರ್ನಾಟಕಕ್ಕೆ ಒಬ್ಬ ಯುವನಾಯಕನನ್ನು ಸೃಷ್ಟಿ ಮಾಡಿಕೊಟ್ಟಿದ್ದೇನೆ' ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೃಷ್ಣ ಅವರು ಇದೇ ಸಂದರ್ಭದಲ್ಲಿ ಶಿವಕುಮಾರ್ ಮತ್ತು ಕ್ಷೇತ್ರದ ಜನತೆಯನ್ನು ಪರಸ್ಪರ ಅಭಿನಂದಿಸಿದರು.
ಶಿವಕುಮಾರ್ ಅವರು ಕೈಗೊಂಡಿರುವ ಸಾಧನೆಗಳನ್ನು ಮೆಲುಕು ಹಾಕಿದ ಕೃಷ್ಣ ಅವರು ಕನಕಪುರದ ಎಂಜಿ ರಸ್ತೆಯ ಆಗಲೀಕರಣ ಅಭಿವೃದ್ಧಿಯಾಗಿರುವುದನ್ನು ನೋಡಿದರೆ ನನಗೆ ಕನಸಿನಂತೆ ಕಾಣುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು. ನನ್ನ ಸರ್ಕಾರದ ಅವಧಿಯಲ್ಲೇ ಎಲ್ಲಾ ಪಟ್ಟಣದ ಮುಖ್ಯ ರಸ್ತೆಗಳನ್ನು ಆಗಲೀಕರಣ ಮಾಡಬೇಕೆಂಬ ಪ್ರಯತ್ನ ಮಾಡಲಾಗಿತ್ತು. ಅದರೆ ಜೆಡಿಎಸ್ ಪಕ್ಷದವರು ಸುಳ್ಳು ಹೇಳಲು ಹೊರಟಿದ್ದಾರೆ. ಕನಕಪುರ ಅಭಿವೃದ್ಧಿ ಸಹಿಸದವರು ಶಿವಕುಮಾರ್ ಅವರನ್ನು ಟೀಕಿಸುತ್ತಿದ್ದಾರೆ ಎಂದು ಕೃಷ್ಣ ವ್ಯಘ್ರರಾದರು.
ನಾನು ಈ ಕ್ಷೇತ್ರದ ಶಾಸಕನಾದ ಮೇಲೆ ಪಟ್ಟಣ ವ್ಯಾಪ್ತಿಯಲ್ಲಿನ ಶೇ. 90ರಷ್ಟು ಎಲ್ಲ ರಸ್ತೆಗಳು ಸಿಮೆಂಟ್ ರಸ್ತೆಗಳಾಗಿವೆ. ಹಾಗೆಯೇ ಶೇ.85ರಷ್ಟು ಚರಂಡಿಗಳಾಗಿವೆ ಎಂದು ತಮ್ಮ ಸಾಧನೆಗಳ ಪಟ್ಟಿ ನೀಡಿದ ಸ್ಥಳೀಯ ಅಭ್ಯರ್ಥಿ ಶಿವಕುಮಾರ್, ಕ್ಷೇತ್ರವನ್ನು 6 ಬಾರಿ ಪ್ರತಿನಿಧಿಸಿದ್ದ ಪಿಜಿಆರ್ ಸಿಂಧ್ಯಾ ಅವರು ಏಕೆ ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲಿಲ್ಲ ಎಂದು ಪ್ರಶ್ನಿಸಿದರು.
ಇದೇ 5ರಂದು ನಡೆಯುವ ಚುನಾವಣೆಯಲ್ಲಿ ನನಗೆ ಆಶೀರ್ವದಿಸಿ ಕನಕಪುರವನ್ನು ಕನಕನಗರವನ್ನಾಗಿ ಮಾಡಲು ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಅವರು ಮನವಿ ಮಾಡಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications