ಮೈಸೂರು : ಸಿದ್ದಲಿಂಗಸ್ವಾಮಿ ಮೇಲೆ ಹಲ್ಲೆ ಯತ್ನ

Kapu Siddalinga Swamy
ಮೈಸೂರು, ಮೇ 3 : ವಿಧಾನಸಭೆ ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿರುವಂತೆಯೇ ಅಲ್ಲಲ್ಲಿ ಘರ್ಷಣೆಗಳು ಸಂಭವಿಸುತ್ತಿವೆ. ಮೈಸೂರಿನ ವರುಣಾ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಕಾಪು ಸಿದ್ದಲಿಂಗ ಸ್ವಾಮಿ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ.

ಮೈಸೂರಿನ ಹೆಲಿಪ್ಯಾಡ್ ಸಮೀಪ ತೆರಳುತ್ತಿದ್ದ ಸಿದ್ದಲಿಂಗ ಸ್ವಾಮಿ ಅವರ ಕಾರನ್ನು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು, ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಗುಂಪನ್ನು ಚದುರಿಸಿದ್ದಾರೆ.

ಪ್ರಚಾರ ನಡೆಸದಂತೆ ಸಿದ್ದಲಿಂಗಸ್ವಾಮಿ ಅವರಿಗೆ ಬೆದರಿಕೆ ಹಾಕಿದ ಕಾರ್ಯಕರ್ತರು, ಸಿದ್ದಲಿಂಗ ಸ್ವಾಮಿ ಅವರ ಕಾರನ್ನು ತಡೆದರು. ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಎರಡು ದಿನಗಳ ಹಿಂದೆ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ ನಡೆಸುತ್ತಿದ್ದ ವೇಳೆ ಸಿದ್ದಲಿಂಗ ಸ್ವಾಮಿ ಅವರ ಬೆಂಬಲಿಗರು ಅವರ ಮೇಲೆ ಕಲ್ಲು ತೂರಾಟ ನಡೆಸಲು ಯತ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಮೇಲೆ ಹಲ್ಲೆ : ತುಮಕೂರು ಜಿಲ್ಲೆ ಶಿರಾ ತಾಲೂಕಿನ ಪಕ್ಷೇತರ ಎಂ.ಡಿ.ಈರಣ್ಣ ಅವರ ಮೇಲೆ ಹಲ್ಲೆ ನಡೆದಲಾಗಿದೆ. ಈರಣ್ಣ ಅವರ ಭುಜ ಮತ್ತು ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ.

ಈರಣ್ಣ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಲುವ ಭೀತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಈರಣ್ಣ ಸಹೋದರ ಆರೋಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+