ಮತದಾನ : ಕೋಲಾರದಲ್ಲಿ ಲಾಂಗು ಮಚ್ಚುಗಳ ದರ್ಶನ

weapon
ಕೋಲಾರ, ಮೇ 5 : ರಾಜ್ಯದಲ್ಲಿ ಶಾಂತಿಯುತ ಮತದಾನ ನಡೆಯುತ್ತಿದ್ದಾಗಲೇ ಕೋಲಾರದಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ವರ್ತೂರು ಪ್ರಕಾಶ್ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಲಾಂಗು, ಮಚ್ಚುಗಳನ್ನು ತೋರಿಸಿ ವರ್ತೂರು ಬೆಂಲಿಗರನ್ನು ಬೆದರಿಸಿದ್ದಾರೆ.

ಭಾನುವಾರ ಬೆಳಗ್ಗೆ ಮತಗಟ್ಟೆ ಸಂಖ್ಯೆ 122ರ ಬಳಿ ಪೊಲೀಸರ ಸಮ್ಮಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ವರ್ತೂರು ಪ್ರಕಾಶ್ ಬೆಂಬಲಿಗರಿಗೆ ಲಾಂಗ್ ತೋರಿಸಿ ಹಲ್ಲೆ ನಡೆಸಲು ಮುಂದಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಂಗು ಗಳನ್ನು ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹಮದ್ ಅವರ ಬೆಂಗಲಿಗರಾದ ನಗರಸಭೆ ಸದಸ್ಯ ಪ್ರಸಾದ್ ಬಾಬು ಮತ್ತು ಅವರ ಹಿಂಬಾಲಕರು ಲಾಂಗು, ಮಚ್ಚುಗಳನ್ನು ತೋರಿಸಿ ವರ್ತೂರು ಪ್ರಕಾಶ್ ಬೆಂಬಲಿಗರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರು ಇವರನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಅವರು ಠಾಣೆಯಿಂದಲೇ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮತಗಟ್ಟೆಯಿಂದ ಕೇವಲ 200 ಮೀ ದೂರದಲ್ಲಿ ಸಾರ್ವಜನಿಕರ ಎದುರೇ ಲಾಂಗು, ಮಚ್ಚುಗಳನ್ನು ತೋರಿಸಿದ್ದರಿಂದ ಭಯದ ವಾತಾವರಣ ನಿರ್ಮಾಣ ವಾಗಿತ್ತು. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಮತದಾನಕ್ಕೆ ಅಡಚಣೆ ಉಂಟಾಗದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಕೈಯಲ್ಲಿ ಮಚ್ಚು, ಲಾಂಗು ನೋಡಿದ ವರ್ತೂರು ಪ್ರಕಾಶ್ ಬೆಂಬಲಿಗರು ಸ್ಥಳದಿಂದ ಪರಾರಿಯಾಗಿದ್ದಾರೆ. ಸಣ್ಣ ಮಟ್ಟಿನ ವಾಗ್ವಾದದಿಂದ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ : ಶಿಢ್ಲಘಟ್ಟ ತಾಲೂಕಿನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಮತದಾರರನ್ನು ಕರೆತರುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಜೆಡಿಎಸ್ ಕಾರ್ಯಕರ್ತ ದೇವಪ್ಪ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+