ಸೋಮವಾರವೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶ

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಎರಡೂ ಪರೀಕ್ಷೆ ಫಲಿತಾಂಶಗಳು ಮೇ 6ರಂದು ಪ್ರಕಟವಾಗುವುದಾಗಿ ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿರುವುದು ವಿದ್ಯಾರ್ಥಿಗಳಲ್ಲಿ ಸಾಕಷ್ಟು ಗೊಂದಲ ಮೂಡಿಸಿತ್ತು. ಎಸ್ಸೆಸ್ಸೆಲ್ಸಿ ಮೊದಲೋ ದ್ವಿತೀಯ ಪಿಯುಸಿ ಮೊದಲೋ ಎಂಬುದು ತಿಳಿಯಲಾಗದೆ ಪರದಾಡುತ್ತಿದ್ದರು. [ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ]
ಈ ಎಲ್ಲ ಗೊಂದಲಗಳಿಗೆ ಪೂರ್ಣವಿರಾಮ ಹೇಳಿರುವ ಪಿಯು ಮಂಡಳಿ ಅಧಿಕಾರಿಗಳು ಸೋಮವಾರ ಸಂಜೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಒನ್ಇಂಡಿಯಾ ಕನ್ನಡಕ್ಕೆ ಹೇಳಿ ವಿದ್ಯಾರ್ಥಿಗಳಲ್ಲಿ ನಿರಾಳತೆ ಮೂಡಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಕೂಡ ಸೋಮವಾರದಂದೇ ಪ್ರಕಟವಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಫಲಿತಾಂಶಗಳು ಒಂದೇ ದಿನ ಪ್ರಕಟವಾಗುತ್ತಿರುವುದು ಇದೇ ಮೊದಲು.
ಸಂಜೆ 5 ಗಂಟೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ವಿವರವನ್ನು ನೀಡಲಿದ್ದಾರೆ. 6 ಗಂಟೆಯ ನಂತರ ಒನ್ಇಂಡಿಯಾ ಕನ್ನಡ ಅಂತರ್ಜಾಲ ತಾಣ ಮತ್ತು ಒನ್ಇಂಡಿಯಾದ ಶಿಕ್ಷಣ ಪೋರ್ಟಲ್ ಸೇರಿದಂತೆ ಇತರ ಅಂತರ್ಜಾಲ ತಾಣಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೇ 7, ಮಂಗಳವಾರ ಆಯಾ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಮತ್ತು ಆಯಾ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ದೊರೆಯಲಿದೆ. [ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ] [ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ]












Click it and Unblock the Notifications