ಎಸ್ಸೆಸ್ಸೆಲ್ಸಿ ಪರೀಕ್ಷೆ 2013 ಫಲಿತಾಂಶ ಪ್ರಕಟ

ಬೆಂಗಳೂರು, ಮೇ.5: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ಅವರು ಸುದ್ದಿಗೋಷ್ಠಿಯಲ್ಲಿ ಸೋಮವಾರ(ಮೇ.5) ಪ್ರಕಟಿಸಿದರು.

ಒಟ್ಟು 35 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಹೊರಬಿದ್ದಿದೆ. ಒಟ್ಟಾರೆ ಶೇ 77.47 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅನುದಾನಿತ ಶಾಲೆಗಳಲ್ಲಿ ಶೇ 86.23 ರಷ್ಟು ಫಲಿತಾಂಶ ಬಂದಿದೆ.ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಮಂಡ್ಯ ದ್ವಿತೀಯ ಹಾಗೂ ಉಡುಪಿ ತೃತೀಯ ಸ್ಥಾನಕ್ಕೆ ಕುಸಿದಿದೆ. ಬೀದರ್ ಕೊನೆ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ. 622 ಅಂಕ ಗಳಿಸಿದ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಎಂದು ಕುಮಾರ್ ನಾಯಕ್ ವಿವರಿಸಿದರು.

Karnataka SSLC results 2013 announced

ಬಾಲಕಿಯರು ಶೇ. 82.30ರಷ್ಟು ಹಾಗೂ ಬಾಲಕರು ಶೇ.73.25ರಷ್ಟು ಉತ್ತೀರ್ಣರಾಗಿದ್ದಾರೆ. ಅನುದಾನಿತ ಶಾಲೆಗಳಲ್ಲಿ ಶೇ.80.21ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಸಂಜೆ ವೇಳೆಗೆ ಒನ್ ಇಂಡಿಯಾ ಕನ್ನಡ ವೆಬ್ ಸೈಟ್ ಸೇರಿದಂತೆ ಇಂಟರ್‌ನೆಟ್‌ನಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯವಾಗಲಿದೆ.

ಏ.1 ರಿಂದ ಏ.10ರ ತನಕ ಪರೀಕ್ಷೆ ನಡೆಸಲಾಯಿತು. 30 ಜಿಲ್ಲೆಗಳ 208 ಕೇಂದ್ರಗಳಲ್ಲಿ ಸುಮಾರು 63,000 ಮೌಲ್ಯ ಮಾಪಕರು ವಿದ್ಯಾರ್ಥಿಗಳಿಗೆ ಬೇಗನೆ ರಿಸಲ್ಟ್ ಒದಗಿಸುವಲ್ಲಿ ಸಫಲರಾಗಿದ್ದಾರೆ. ಸುಮಾರು 8.49 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಎಸ್ಸೆಸೆಲ್ಸಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕದ 3,003 ಕೇಂದ್ರಗಳಲ್ಲಿ ಪರೀಕ್ಷೆಗಳಲ್ಲಿ ಸುಗಮವಾಗಿ ಪರೀಕ್ಷೆ ನಡೆಸಲಾಗಿತ್ತು.

ವೆಬ್ ಸೈಟ್ ನಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಜೊತೆಗೆ ಆಯಾ ಶಾಲೆಗಳಲ್ಲಿ ಫಲಿತಾಂಶ ಸೂಕ್ತ ಸಮಯಕ್ಕೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಒನ್ ಒಂಡಿಯಾ ಕನ್ನಡದಲ್ಲಿ ಸಂಪೂರ್ಣ ಫಲಿತಾಂಶ ವಿವರ ಇಲ್ಲಿ ಪಡೆಯಿರಿ..

ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಹರಡಿರುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯಲಾಗಿದ್ದು, ಸೋಮವಾರ ಮೇ 6ರ ಮಧ್ಯಾಹ್ನ 12.30ಕ್ಕೆ ಎಸ್ಸೆಸ್ಸೆಲ್ಸಿ ಮತ್ತು ಸಂಜೆ 5.30 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+