ಮತದಾನ : ಇತಿಹಾಸ ಬರೆದ ಮಂಗಳ ಮುಖಿಯರು

ಕರ್ನಾಟಕ ಚುನಾವಣೆಯ ಒಟ್ಟು ಮತದಾರರ ಸಂಖ್ಯೆ ಪ್ರಕಟಿಸುವಾಗಲೇ ಚುನಾವಣಾ ಆಯೋಗ 2919 ಲೈಗಿಂಕ ಅಲ್ಪ ಸಂಖ್ಯಾತರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಿತ್ತು. ಆದರೆ, ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬ ವಿವರಗಳು ಲಭ್ಯವಾಗಿಲ್ಲ.
ಮತದಾನದ ಹಕ್ಕಿಗಾಗಿ ಲೈಗಿಂಕ ಅಲ್ಪಸಂಖ್ಯಾತರು ಸುಮಾರು 50 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಕರ್ನಾಟಕದ ಚುನಾವಣೆಯಲ್ಲಿ ಇವರಿಗೆ ಮತದಾನದ ಹಕ್ಕು ನೀಡಬೇಕು ಎಂದು ತಯಾರಿ ನಡೆಸಿದ್ದ ಚುನಾವಣಾ ಆಯೋಗ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇವರಿಗೆ ಅವಕಾಶ ಕಲ್ಪಿಸಿತ್ತು.
ಲೈಗಿಂಕ ಅಲ್ಪ ಸಂಖ್ಯಾತರು, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಅರ್ಜಿಯಲ್ಲಿ ಲಿಂಗ ಪರಿವರ್ತಕ ಎಂದು ನಮೂದಿಸಿದ್ದರು. ಅವರನ್ನು ಲೈಂಗಿಕ ಅಲ್ಪಸಂಖ್ಯಾತರು ಎಂದು ಪರಿಗಣಿಸಿ ರಾಜ್ಯಾದ್ಯಂತ ಒಟ್ಟು 2919 ಜನರಿಗೆ ಮತದಾನಕ್ಕೆ ಮಾಡಲು ಅವಕಾಶ ನೀಡಲಾಗಿತ್ತು.
ಎರಡು ಸಾವಿರ ಲೈಗಿಂಕ ಅಲ್ಪಸಂಖ್ಯಾತರಲ್ಲಿ 875 ಜನರು ಬೆಂಗಳೂರು ನಗರದಲ್ಲಿ ವಾಸಿಸುತ್ತಿದ್ದಾರೆ ಎಂದು ಆಯೋಗ ಮಾಹಿತಿ ಸಂಗ್ರಹಿಸಿತ್ತು. ಇವರಲ್ಲಿ 118 ಮಂದಿ ಮಹದೇವಪುರ ಕ್ಷೇತ್ರದಲ್ಲಿ ವಾಸವಾಗಿದ್ದಾರೆ. ಆದರೆ, ಎಷ್ಟು ಜನ ಭಾನುವಾರ ಮತ ಚಲಾಯಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.
ಹಲವು ವರ್ಷಗಳ ಹೋರಾಟದ ಬಳಿಕ ಚುನಾವಣಾ ಆಯೋಗ ಮತದಾನಕ್ಕೆ ಅವಕಾಶ ಕಲ್ಪಿಸಿತ್ತು. ಯಾವುದೇ ಸರ್ಕಾರಗಳು ನಮಗೆ ಸೂಕ್ತ ಸೌಲಭ್ಯ ಒದಗಿಸಲು ಶ್ರಮಿಸುವುದಿಲ್ಲ. ನಾವು ಮತ ಹಾಕುವುದಿಲ್ಲ ಎಂದು ರಾಜಕೀಯ ಪಕ್ಷಗಳು ಹೀಗೆ ಮಾಡುತ್ತವೆ ಎಂದು ಲೈಂಗಿಕ ಅಲ್ಪಸಂಖ್ಯಾತರು ಆರೋಪಿಸುತ್ತಿದ್ದರು.
ಮೈಸೂರಿನಲ್ಲಿ ಅಭ್ಯರ್ಥಿಯಾಗಿದ್ದರು : ಮೈಸೂರಿನ ನರಸಿಂಹರಾಜ ಕ್ಷೇತ್ರದಿಂದ ಲೈಂಗಿಕ ಅಲ್ಪ ಸಂಖ್ಯಾತರಾದ ಚಾಂದಿನಿ (35) ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಬಳ್ಳಾರಿಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಲೈಂಗಿಕ ಅಲ್ಪಸಂಖ್ಯಾತರೊಬ್ಬರು ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದಾರೆ.
ಲೈಂಗಿಕ ಅಲ್ಪಸಂಖ್ಯಾತರಿಗೆ ಮತದಾನದ ಹಕ್ಕು ನೀಡಬೇಕೆಂಬ ಹಲವು ವರ್ಷಗಳ ಕೂಗಿಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬರುವ ಸರ್ಕಾರ ಇವರಿಗೆ ಸೂಕ್ತ ವ್ಯವಸ್ಥೆ ಒದಗಿಸಿ ಕೊಡಲಿದೆಯೇ ಎಂದು ಕಾದು ನೋಡಬೇಕು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications