ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

Karnataka State Government hikes DA of its employees by 9%
ಬೆಂಗಳೂರು, ಮೇ.9 : ರಾಜ್ಯ ಸರ್ಕಾರಿ ನೌಕರರಿಗೆ ಶೇ.5ರಷ್ಟು ತುಟ್ಟಿಭತ್ಯೆ ಪ್ರಕಟಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರ 2012ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ 2013ರ ಜನವರಿ ಒಂದರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಪ್ರಮಾಣ ಶೇ.4ರಿಂದ 9ಕ್ಕೆ ಏರಿದಂತ್ತಾಗಿದೆ.

ಸರ್ಕಾರದ ಆದೇಶದ ಮೇರೆಗೆ ತುಟ್ಟಿ ಭತ್ಯೆಯನ್ನು ನಗದಾಗಿ ಪಾವತಿ ಮಾಡಲಾಗುವುದು. ಜನವರಿಯಿಂದ ನೀಡಬೇಕಿರುವ ಬಾಕಿಯನ್ನು ನಗದು ರೂಪದಲ್ಲಿ ಪಾವತಿಸುವುದಾಗಿ ಆದೇಶದಲ್ಲಿ ಹೇಳಲಾಗಿದೆ. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ತುಟ್ಟಿ ಭತ್ಯೆ ಹೆಚ್ಚಳ ಪ್ರಕ್ರಿಯೆ ವಿಳಂಬವಾಗಿತ್ತು.

ರಾಜ್ಯ ಸರ್ಕಾರಿ ನೌಕರರಿಗೆ ಶೇ.5ರಷ್ಟು ತುಟ್ಟಿಭತ್ಯೆ ಪ್ರಕಟಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಲೆ ಸೂಚ್ಯಾಂಕವನ್ನು ಆಧರಿಸಿ ಕಳೆದ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಮೂಲವೇತನದ ಶೇ.5ರಷ್ಟು ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆಗೊಳಿಸಿ ಅಧಿಕೃತ ಆದೇಶವನ್ನು ಹೊರಡಿಸಿದೆ.

ಕೇಂದ್ರ ಸರ್ಕಾರದ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ನೀಡಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘ ಈಗಾಗಲೇ ಮನವಿ ಮಾಡಿತ್ತು. ಮನವಿಯನ್ನು ಪರಿಗಣಿಸಿ ತುಟ್ಟಿಭತ್ಯೆ ಬಿಡುಗಡೆ ಮಾಡಿರುವುದಕ್ಕೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘವು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಲಿದೆ ಎಂದು ಸಂಘದ ಅಧ್ಯಕ್ಷ ಎಲ್.ಭೈರಪ್ಪ ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದ 80 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಡಿಎ ಹೆಚ್ಚಳ ಮಾಡಲಾಗಿತ್ತು. ಶೇ 65 ರಿಂದ ಶೇ 72ಕ್ಕೆ ತುಟ್ಟಿಭತ್ಯೆ ಹೆಚ್ಚಿಸಲಾಗಿದ್ದು, ಶೇ 7ರಷ್ಟು ಡಿಎ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ 50 ಲಕ್ಷ ಉದ್ಯೋಗಿಗಳಿಗೆ ಹಾಗೂ 30 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ತುಟ್ಟಿ ಭತ್ಯೆ(dearness allowance):
ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+