• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಳಗಾವಿ : ಯವತಿಯ ಮೇಲೆ ಅತ್ಯಾಚಾರ

|
ಬೆಳಗಾವಿ, ಮೇ 10 : ಕಾಮುಕನೊಬ್ಬ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೆ ಒಳಗಾದ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಯುವತಿ ಸಹೋದರನ ಸಹಾಯದಿಂದ ಗುರುವಾರ ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರಿಗೆ ಯುವತಿ ನೀಡಿರುವ ದೂರಿನ ಅನ್ವಯ ಆರೋಪಿ ಅಪ್ಪಾ ಸಾಹೇಬ ವಸಂತ ಕೋಳಿ (ಪಿಂಟು) ಮೇ 2ರಿಂದ ಈಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ತಿಳಿದು ಬಂದಿದೆ. ಯಾರ ಹತ್ತಿರವಾದರೂ ಈ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ ಎಂದು ಯುವತಿ ದೂರಿದ್ದಾಳೆ.

ನಿರಂತರ ಅತ್ಯಾಚಾರದಿಂದ ಕ್ರೂರ ಹಿಂಸೆ ಅನುಭವಿಸಿದ ಯುವತಿ ಮಹಾರಾಷ್ಟ್ರದಲ್ಲಿರುವ ಸಹೋದರನಿಗೆ ಈ ಬಗ್ಗೆ ಹೇಳಿಕೊಂಡಿದ್ದಾಳೆ. ಗುರುವಾರ ಬೆಳಗಾವಿಗೆ ಆಗಮಿಸಿದ ಆತ, ಸಹೋದರಿಗೆ ಧೈರ್ಯತುಂಬಿ ಪೊಲೀಸರಿಗೆ ದೂರು ಕೊಡಿಸಿದ್ದಾನೆ.

ಆರೋಪಿಗೆ ಅನೈತಿಕ ಸಂಬಂಧವಿತ್ತು : ಆರೋಪಿ ಪಿಂಟು ಸಿದ್ದಾಪುರವಾಡಿ ಗ್ರಾಮದವನಾಗಿದ್ದು, ತನ್ನ ತಾಯಿಯೊಂದಿಗೆ ನಾಲ್ಕು ವರ್ಷಗಳಿಂದ ಅನೈತಿಕ ಸಂಬಧವಿಟ್ಟುಕೊಂಡಿದ್ದಾನೆ ಎಂದು ಯವತಿ ಗಂಭೀರ ಆರೋಪ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕೋಡಿ ಪೊಲೀಸರು ವಿಚಾರಣೆ ಪ್ರಾರಂಭಿಸಿದ್ದಾರೆ.

ಯವತಿಯನ್ನು ಸದ್ಯ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ನಡೆಸಿ ವರದಿ ಪಡೆಯಲಾಗಿದೆ. ಯವತಿಯ ತಾಯಿ ಮತ್ತು ಆರೋಪಿಯನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
In Belgaum district Chikodi taluk 22 year girl alleged that a person Appasaheb had raped her from last Four days. and accused threatening her if you file complaint i will kill you. With support of his brother girl filed complaint in Chikodi police station on May, 9. police searching for accused.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more