ದೆಹಲಿ ಶೂಟೌಟ್ : ಪಿಯು ವಿದ್ಯಾರ್ಥಿನಿ ಹತ್ಯೆ

shoot
ನವದೆಹಲಿ, ಮೇ 10 : ರಾಷ್ಟದ ರಾಜಧಾನಿ ನವದೆಹಲಿ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದುಷ್ಕರ್ಮಿಗಳಿಬ್ಬರು ಮನೆಗೆ ನುಗ್ಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಕೊಲೆ ಮಾಡಿರುವ ದಾರುಣ ಘಟನೆ ಶುಕ್ರವಾರ ಹಾಡುಹಗಲೇ ನಡೆದಿದೆ.

ಶುಕ್ರವಾರ ಮಧ್ಯಾಹ್ನ 12,30ರ ವೇಳೆಗೆ ಮನಿರೇಕಾ ಪ್ರದೇಶದಲ್ಲಿರುವ ಪಿಯು ವಿದ್ಯಾರ್ಥಿನಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ ಆಕೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುಂಡುಗಳು ತಗುಲಿದ್ದು, ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ದಾಳಿ ನಡೆಸಿದ ಅಪರಿಚಿತರು ತಕ್ಷಣ ಪರಾರಿಯಾಗಿದ್ದಾರೆ. ದಾಳಿ ನಡೆದ ಸಂದರ್ಭದಲ್ಲಿ ಮನೆಯಲ್ಲಿ ವಿದ್ಯಾರ್ಥಿನಿ ಒಬ್ಬಳೇ ಇದ್ದಳು ಎಂದು ತಿಳಿದು ಬಂದಿದೆ. ಮೃತ ವಿದ್ಯಾರ್ಥಿಯನ್ನು ಆರ್. ಕೆ. ಪುರ ಕಾಲೇಜಿನ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆ. ಸಹಪಾಠಿಗಳ ಕೃತ್ಯವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+