ಮೇ 27ಕ್ಕೆ ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ

Karnataka CET 2013 Results on May 27, 2013,
ಬೆಂಗಳೂರು, ಮೇ.12: ಕರ್ನಾಟಕ ಸಿಇಟಿ ಪರೀಕ್ಷೆ ಫಲಿತಾಂಶ ಮೇ 27ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳಿಂದ ತಿಳಿದು ಬಂದಿದೆ. ಆದರೆ ಈ ವರ್ಷ ಇಂಜಿನಿಯರಿಂಗ್ ಹಾಗೂ ವೈದ್ಯ ಕೋರ್ಸ್ ‌ಗಳ ಶ್ರೇಯಾಂಕ (rank) ಪ್ರಕಟವಾಗುವುದಿಲ್ಲ.

ಇಂಜಿನಿಯರಿಂಗ್ ವೃತ್ತಿಪರ ಕೋರ್ಸಿಗೆ ಪ್ರವೇಶ ಬಯಸುತ್ತಿರುವ ವಿದ್ಯಾರ್ಥಿಗಳ rank ಮಾತ್ರ ಘೋಷಿಸಲಾಗುತ್ತದೆ. ಸುಪ್ರೀಂ ಕೋರ್ಟಿನ ತೀರ್ಪಿನ ಬಳಿಕ ವೈದ್ಯ ವಿದ್ಯಾರ್ಥಿಗಳ ಶ್ರೇಯಾಂಕ ಪಟ್ಟಿ ಪ್ರಕಟವಾಗಲಿದೆ.

ಈ ಶೈಕ್ಷಣಿಕ ವರ್ಷದಲ್ಲಿಯೂ ಆನ್ ಲೈನ್ ಕೌನ್ಸೆಲಿಂಗ್ ಮುಂದುವರೆಯಲಿದ್ದು, ರಾಜ್ಯದ 13 ಕೇಂದ್ರಗಳಲ್ಲಿ ಮೇ 29ರಿಂದ ಪ್ರಾರಂಭವಾಗಲಿದೆ. ಮೇ 29 ರಂದು 13 ಕೇಂದ್ರಗಳಲ್ಲಿ ದಾಖಲಾತಿ ಪರಿಶೀಲನೆ ನಡೆಯಲಿದೆ. ಜೂ.2 ರಿಂದ ಆಪ್ಷನ್ ಎಂಟ್ರಿ ನಡೆಯಲಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ನಿಯಮಾನುಸಾರ ಜು.31ರೊಳಗೆ ಮುಗಿಯಲಿದೆ. ಬೆಂಗಳೂರು, ಮೈಸೂರು, ಹಾಸನ, ಮಂಗಳೂರು, ಶಿವಮೊಗ್ಗ, ಕಾರವಾರ, ಬೆಳಗಾವಿ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಹುಬ್ಬಳ್ಳಿ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಆನ್‌ಲೈನ್ ಕೌನ್ಸೆಲಿಂಗ್ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.

ಮೇ1 ಬುಧವಾರ ಮತ್ತು ಮೇ 2ರ ಗುರುವಾರ 287 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 1.39 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಮೇ 3ರಂದು ಪರೀಕ್ಷೇ ನಡೆಸಲಾಗಿತ್ತು.

ಈ ಪೈಕಿ 1.10 ಲಕ್ಷ ವಿದ್ಯಾರ್ಥಿಗಳು ಜೀವಶಾಸ್ರ್ರ ವಿಷಯ ಪರೀಕ್ಷೆ ಬರೆದಿದ್ದರು ಹಾಗೂ 1.22 ಲಕ್ಷ ವಿದ್ಯಾರ್ಥಿಗಳು ಗಣಿತ ವಿಷಯ ಪರೀಕ್ಷೆ ಬರೆದಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ವೈದ್ಯಕೀಯ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಳ್ಳುವ ಮುನ್ನ ಎನ್ ಇಇಟಿ ಬರೆಯಬೇಕೋ ಅಥವಾ ಸಿಇಟಿ ಪರೀಕ್ಷೆ ಬರೆಯಬೇಕೋ ಎಂಬ ಗೊಂದಲಕ್ಕೆ ಬಿದ್ದಿದ್ದರು. ಈ ಕುರಿತ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದ್ದು, ಕೋರ್ಟ್ ನಲ್ಲಿ ವಿದ್ಯಾರ್ಥಿಗಳ ಪರವಾಗಿ ಆದೇಶ ಬಂದರೆ ವೈದ್ಯಕೀಯ ಪ್ರವೇಶ ಪಡೆಯಬಹುದಾಗಿದೆ. ಆದರೆ. ಆದೇಶ ವಿದ್ಯಾರ್ಥಿಗಳ ಪರವಾಗಿ ಇಲ್ಲದಿದ್ದರೆ, ಸಿಇಟಿ ಅಥವ ಎನ್ಇಇಟಿಯಲ್ಲಿ ಯಾವುದಾದರೂ ಒಂದು ಪರೀಕ್ಷೆ ಅಸಿಂಧುವಾಗುವ ಸಾಧ್ಯತೆ ಇದೆ.

ಕಾಮೆಡ್ ಕೆ ಪರೀಕ್ಷೆ : ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಾಗಿ ಕಾಮೆಡ್ ಕೆ ಪರೀಕ್ಷೆಯನ್ನು ರಾಜ್ಯದೆಲ್ಲೆಡೆ ಏಕಕಾಲಕ್ಕೆ ಭಾನುವಾರ(ಮೇ.12) ನಡೆಸಲಾಗುತ್ತಿದೆ. 88,706 ವಿದ್ಯಾರ್ಥಿಗಳು ಕಾಮೆಡ್ ಪರೀಕ್ಷೆ ಬರೆಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+