ಸಿದ್ದು ಅಭಿಮಾನಿ ಸಾವು, ಪರಿಹಾರ ಘೋಷಣೆ

ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಸಿ ಹೊರಬರುವಾಗ ಸ್ಟೇಡಿಯಂನ ಗೇಟ್ ನಂ 5 ಬಳಿ ನೂಕು ನುಗ್ಗಲು ಸಂಭವಿಸಿತು. ಈ ಸಂದರ್ಭದಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಮಂಜಪ್ಪ (40) ಅವರಿಗೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಹತ್ತಿರದ ಮಲ್ಯ ಆಸ್ಪತ್ರಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಂಜಪ್ಪ ಮೃತಪಟ್ಟಿದ್ದಾರೆ.
ನೂಕು ನುಗ್ಗಲಿನಲ್ಲಿ ಅಜ್ಜಿಯೊಬ್ಬರಿಗೂ ಗಾಯವಾಗಿದ್ದು ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಪರಿಹಾರ ಘೋಷಣೆ : ಪದಗ್ರಹಣ ಸಮಾರಂಭದ ನಂತರ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ತೆರಳಿ ನಂತರ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತ ಮಂಜಪ್ಪನ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮಧ್ಯಾಹ್ನ 3 ಗಂಟೆಯ ವೇಳೆಗೆ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಮೃತನ ಕುಟುಂಬಕ್ಕೆ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದರು. ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದರು.












Click it and Unblock the Notifications