ಧಾರವಾಡ : ಅಪ್ರಾಪ್ತೆಯ ಮೇಲೆ ರೇಪ್

ಧಾರವಾಡ ತಾಲೂಕಿನ ಬೇಲೂರಿನಲ್ಲಿ ಈ ಅಮಾನುಷ ಪ್ರಕರಣ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
4 ನೇ ತರಗತಿ ಓದುತ್ತಿರುವ ಬಾಲಕಿಗೆ ಹನುಮಂತ ಮಾದಾರ್ (30) ಎಂಬ ವ್ಯಕ್ತಿ ಬೆದರಿಕೆವೊಡ್ಡಿ ಆರು ಬಾರಿ ಅತ್ಯಾಚಾರ ನಡೆಸಿದ್ದ ಎಂದು ಬಾಲಕಿಯ ಕುಟುಂಬದವರು ದೂರಿದ್ದಾರೆ. ಬಾಲಕಿ ಗರ್ಭೀಣಿ ಆದಾಗ ವಿಷಯ ಬೆಳಕಿಗೆ ಬಂದಿದೆ.
ಬೇಲೂರು ಗ್ರಾಮದವನೇ ಆದ ಪಾಪಿ ಹನುಮಂತ ಮಾದಾರ್ ಗೆ ವಿವಾಹವಾಗಿ ಮೂವರು ಮಕ್ಕಳಿದ್ದಾರೆ. ಆದರೂ, ಈತನ ಕಣ್ಣು ಮುಗ್ಧ ಬಾಲಕಿಯ ಮೇಲೆ ಬಿದ್ದಿದೆ, ನನಗೆ ಬೆದರಿಕೆ ಹಾಕಿ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ.
ಕುಟುಂಬದವರು ಗರಗ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಹನುಮಂತ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಯನ್ನು ಬಂಧಿಸುವುದಾಗಿ ಹೇಳಿದ್ದಾರೆ.
ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಬಾಲಕಿಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಬೇಕು ಎಂದು ಬೇಗೂರು ಗ್ರಾಮಸ್ಥರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications