ಸಿದ್ದರಾಮಯ್ಯ ಮೊದಲ ಸಂಪುಟ ಸಭೆ ನಿರ್ಣಯಗಳು

ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಅವರು ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು. ಎಲ್ಲಾ ಶಾಸಕರಿಗೂ ಸಮಾನ ಆದ್ಯತೆ ನೀಡಲಾಗಿದೆ. ಯಾರನ್ನು ಸಚಿವ ಸಂಪುಟದಿಂದ ದೂರವಿಡುವ ಪ್ರಯತ್ನ ಮಾಡಲಾಗಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ನೂತನ ಸಚಿವರಿಗೆ ಖಾತೆಗಳ ಹಂಚಿಕೆ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದು, ನೂತನ ಶಾಸಕರ ಪ್ರಮಾಣ ವಚನ ಮುಂತಾದ ವಿಚಾರಗಳ ಕುರಿತು ಚರ್ಚಿಸಲಾಯಿತು. ಮೇ 29ರಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್ ನ ವಿಶೇಷ ಅಧಿವೇಶನ ನಡೆಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು ಎಂದರು.
ಸಿದ್ದರಾಮಯ್ಯ ಸಂಪುಟ ಸಭೆಯ ನಿರ್ಣಯಗಳು ಕೆಳಗಿನಂತಿವೆ.
* ಮೇ 29ರಿಂದ ವಿಧಾನಮಂಡಲ ಜಂಟಿ ಅಧಿವೇಶನ
* ಮೇ 30ರಂದು ನೂತನ ಶಾಸಕರ ಪ್ರಮಾಣ ವಚನ
* ಮೇ 31ರಂದು ಸ್ಪೀಕರ್ ಆಯ್ಕೆ
* ಜೂನ್ 1ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ
* ಆರು ದಿನಗಳ ಕಾಲ ವಿಶೇಷ ಅಧಿವೇಶನ
* ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮ
ನೂತನ ಸಚಿವರ ಪಟ್ಟಿ












Click it and Unblock the Notifications