ಸ್ಥಾನ ವಂಚಿತರಿಂದ ಆಕ್ರೋಶ, ಭುಗಿಲೆದ್ದ ಅತೃಪ್ತಿ

ಕೊಡಗು, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೀದರ, ರಾಮನಗರ, ರಾಯಚೂರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಜಿಲ್ಲಾವಾರು, ಜಾತಿವಾರು ಲೆಕ್ಕಾಚಾರದಲ್ಲಿ ಪ್ರಾತಿನಿಧ್ಯ ಕೊಡಿಸಲಾಗುವುದು ಎಂಬ ಮಾತನ್ನು ಸಿದ್ದರಾಮಯ್ಯ ಉಳಿಸಿಕೊಂಡಿಲ್ಲ ಎಂದು ಆಯಾ ಜಿಲ್ಲೆಯ ಶಾಸಕರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅಕ್ರಮ ಗಣಿಗಾರಿಕೆ ಸೇರಿದಂತೆ ಹಲವಾರು ಕೇಸುಗಳನ್ನು ಎದುರಿಸುತ್ತಿರುವ ಕನಕಪುರ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರಕದ ಕಾರಣ ಅವರ ಬೆಂಬಲಿಗರು ಕನಕಪುರ ಮತ್ತು ರಾಮನಗರ ರಸ್ತೆಗಳಲ್ಲಿ ಟೈರುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆ ನಡೆಸಿದ ಕಾರಣ ಸಂಚಾರ ಅಸ್ತವ್ಯಸ್ತವಾಗಿತ್ತು. ಸಚಿವ ಸ್ಥಾನಕ್ಕಾಗಿ ತಾವು ಕಾಯುವುದಾಗಿ ಡಿಕೆಶಿ ಹೇಳಿಕೆ ನೀಡಿದ್ದಾರಾದರೂ ಅವರ ಬೆಂಬಲಿಗರು ಕೇಳುವ ಸ್ಥಿತಿಯಲ್ಲಿಲ್ಲ.
ಇನ್ನು ಮೈಸೂರಿನಲ್ಲಿ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲವೆಂದು ಅವರ ಬೆಂಬಲಿಗ ಫೈರೋಜ್ ಖಾನ್ ಎಂಬುವವರು ಮೈಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ಇನ್ನೇನು ಬೆಂಕಿಕಡ್ಡಿ ಗೀರುವುದು ಬಾಕಿಯಿರುವಾಗ ಅಕ್ಕಪಕ್ಕದವರು ಬಲವಂತವಾಗಿ ಖಾನ್ ಅವರನ್ನು ದೂರ ಕರೆದುಕೊಂಡು ಹೋಗಿ ಅನಾಹುತ ತಪ್ಪಿಸಿದರು. ಆರಂಭದ ಪಟ್ಟಿಯಲ್ಲಿ ಮಾಜಿ ಕಾಂಗ್ರೆಸ್ಸಿಗ ಅಜೀಜ್ ಸೇಠ್ ಅವರ ಮಗ ತನ್ವೀರ್ ಸೇಠ್ ಅವರ ಹೆಸರಿತ್ತು.
ಚಿಕ್ಕಬಳ್ಳಾಪುರದಲ್ಲಿಯೂ ಗೌರಿಬಿದನೂರು ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲವೆಂದು ಅವರ ಬೆಂಬಲಿಗರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ, ರಸ್ತೆಯಲ್ಲಿ ಟೈರುಗಳನ್ನು ಸುಟ್ಟು ರಸ್ತೆ ತಡೆ ನಡೆಸಿದರು. ಯಾದಗಿರಿಯಲ್ಲಿ ಕೂಡ 5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯಾದಗಿರಿ ಶಾಸಕ ಡಾ. ಎ.ಬಿ. ಮಾಲಕರೆಡ್ಡಿ ಅವರ ಬೆಂಬಲಿಗರು ಕೂಡ ಕಾಂಗ್ರೆಸ್ ಕಚೇರಿಯನ್ನು ಧ್ವಂಸ ಮಾಡಿದ್ದಾರೆ. ಟ್ಯೂಬ್ ಲೈಟ್, ಬಲ್ಬು, ಪೀಠೋಪಕರಣಗಳನ್ನು ಒಡೆದುಹಾಕಿದ್ದಾರೆ. ಕಿಟಕಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.
ಒಟ್ಟಿನಲ್ಲಿ ಅನೇಕ ಜಿಲ್ಲೆಗಳಲ್ಲಿ ಅಸಮಾಧಾನದ ಹೊಗೆ ಆವರಿಸಿಕೊಂಡಿದೆ. ಶಾಸಕರ ಭವನದ ಹೊರಗಿನಿಂದಲೇ ಆರಂಭವಾದ ಪ್ರತಿಭಟನೆಗಳು ಪ್ರಾತಿನಿಧ್ಯ ಸಿಗದ ಜಿಲ್ಲೆಗಳಲ್ಲಿ ಹಬ್ಬಿದೆ. ಸಿದ್ದು ಸಂಪುಟದಲ್ಲಿ ವಿಧಾನಪರಿಷತ್ ಸದಸ್ಯರಿಗೆ ಕೂಡ ಸ್ಥಾನ ನೀಡಲಾಗಿಲ್ಲದ ಕಾರಣ ಮೋಟಮ್ಮ ಮುಂತಾದವರು ಸಿಡಿಮಿಡಿಗೊಂಡಿದ್ದು, ದೆಹಲಿಗೆ ಪಯಣ ಬೆಳೆಸಿ ಸೋನಿಯಾ ಗಾಂಧಿಗೆ ತಮ್ಮ ಅಹವಾಲು ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಮಧ್ಯಾಹ್ನ 12.30ಕ್ಕೆ ಸಂಪುಟ ಸಭೆ ನಡೆಯಲಿದೆ.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
ಕೇರಳಂನಲ್ಲಿ ಕಾಂಗ್ರೆಸ್ - ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ: ಡಿಸಿಎಂ ಡಿ.ಕೆ. ಶಿವಕುಮಾರ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications