ದೊಡ್ಡಬಳ್ಳಾಪುರ : ಕಾಂಗ್ರೆಸ್ ಕಾರ್ಯಕರ್ತನ ಕೊಲೆ

ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ಶಿವಲಿಂಗಯ್ಯ (50) ಸಿದ್ದರಾಮಯ್ಯ ಅಭಿಮಾನಿಯಾಗಿದ್ದ, ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದ. ಅಂದಿನಿಂದ ಕೆಲವು ಗ್ರಾಮಸ್ಥರು ಈತನಿಗೆ ಬೆದರಿಕೆ ಹಾಕಿದ್ದರು.
ಕಾಂಗ್ರೆಸ್ ಪರವಾಗಿ ಕೆಲವ ಮಾಡುವುದನ್ನು ನಿಲ್ಲಿಸದಿದ್ದರೆ ಕೊಲೆ ಮಾಡುತ್ತೇವೆ ಎಂದು ಗ್ರಾಮದ ಕೆಲವರು ಶಿವಲಿಂಗಯ್ಯನಿಗೆ ಬೆದರಿಕೆ ಹಾಕಿದ್ದರು. ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯೂ ಆದರು.
ಭಾನುವಾರ ಹೊರಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದ ಶಿವಲಿಂಗಯ್ಯ ನಂತರ ಕಾಣೆಯಾಗಿದ್ದ. ಕುಟುಂಬ ಸದಸ್ಯರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಬೆಳವಂಗಲ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.
ಮಂಗಳವಾರ ಬೆಳಗ್ಗೆ ಮಚ್ಚೇನಹಳ್ಳಿಯ ಕೆರೆಯಲ್ಲಿ ಶಿವಲಿಂಗಯ್ಯನ ಶವ ಪತ್ತೆಯಾಗಿದ್ದು, ಸ್ಥಳೀಯರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಮೃತವ್ಯಕ್ತಿ ಶಿವಲಿಂಗಯ್ಯ ಎಂದು ಹೇಳಿದ್ದಾರೆ.
ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಅಪಹರಿಸಿ, ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ವಿಚಾರಣೆ ನಡೆಸುತ್ತಿರುವ ಪೊಲೀಸರು ಪ್ರಕರಣ ತನಿಖೆ ಕೈಗೊಂಡಿದ್ದಾರೆ.(ಬೆಂಗಳೂರು ಜಿಲ್ಲೆ: ಸೋತವರು ಗೆದ್ದವರು)












Click it and Unblock the Notifications