ರಾಷ್ಟ್ರೀಯ ಸ್ಥಾನಮಾನ ಬಿಟ್ಟುಕೊಟ್ಟ ಸದಾನಂದ ಗೌಡ

ಯಡಿಯೂರಪ್ಪ ಸಿಟ್ಟನ್ನು ತಣಿಸಲು ಸದಾನಂದ ಗೌಡರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಧಬಾರನೆ ಕೆಳಗೆ ತಳ್ಳಿದ್ದ ಬಿಜೆಪಿ ವರಿಷ್ಠರು, ಮುಂದೆ ಅವರನ್ನು (ಡಿವಿಎಸ್) ಸಮಾಧಾನಪಡಿಸಲೆಂದೇ ಅವರಿಗೆ ರಾಷ್ಟ್ರೀಯಮಟ್ಟದ ಸ್ಥಾನಮಾನ ಕಲ್ಪಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಕಳೆದ ವಾರ ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ಗಡ್ಕರಿ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದಾನಂದ ಗೌಡರನ್ನು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಈ ವಿರೋಧ ಪಕ್ಷದ ನಾಯಕನ ಸ್ಥಾನ ಸಂಪುಟ ದರ್ಜೆ ಸ್ಥಾನಮಾನ ಹೊಂದಿರುವುದರಿಂದ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಕ್ಕೆ ಅವಕಾಶವಿರಲಿಲ್ಲ. ಹಾಗಾಗಿ ಅವರು ರಾಜೀನಾಮೆ ನೀಡುವುದು ಅನಿವಾರ್ಯವಾಗಿತ್ತು.
ಸದಾನಂದ ಗೌಡರಿಂದ ತೆರವಾಗಲಿರುವ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರನ್ನು ಆಯ್ಕೆ ಮಾಡುವ ಬಗ್ಗೆ ರಾಜ್ಯ ಬಿಜೆಪಿ ಚಿಂತನೆ ನಡೆಸಿದೆ. ಈಶ್ವರಪ್ಪ ವಿಧಾನಸಭಾ ಚುನಾವಣೆಯಲ್ಲೂ ಸೋಲು ಅನುಭವಿಸಿರುವುದರಿಂದ ಹಾಗೂ ಹಿರಿತನದ ಆಧಾರದ ಮೇಲೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರ ಸೇವೆಯನ್ನು ಸಮರ್ಥವಾಗಿ ಬಳಸಿಕೊಳ್ಳುವ ಉದ್ದೇಶದಿಂದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಅವರನ್ನು ನೇಮಕ ಮಾಡುವುದು ಸೂಕ್ತ ಎಂಬ ಮಾತು ಕೇಳಿಬರುತ್ತಿದೆ.












Click it and Unblock the Notifications