ಶಿಕ್ಷಣ ಕ್ಷೇತ್ರವೂನೈಸ್, ಕಾಲೇಜು ಆರಂಭಿಸಿದ ಖೇಣಿ

Ashok Kheny
ಬೆಂಗಳೂರು, ಮೇ 22 : ನೈಸ್ ಸಂಸ್ಥೆ ಮುಖ್ಯಸ್ಥ, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಶಿಕ್ಷಣ ರಂಗಕ್ಕೂ ಪಾದಾರ್ಪಣೆ ಮಾಡಿದ್ದಾರೆ. ಕನಕಪುರ ರಸ್ತೆಯಲ್ಲಿ ನಂದಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ಕಾಲೇಜು ಸ್ಥಾಪಿಸಿರುವ ಖೇಣಿ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ನೀಡುವ ಗುರಿ ಹೊಂದಿದ್ದಾರೆ.

ಕನಕಪುರ ರಸ್ತೆಯ ಹಾರೋಹಳ್ಳಿ ಬಳಿ ಇದ್ದ ಆಡನ್ ಟೆಕ್ನಾಲಜಿ ಮತ್ತು ಮ್ಯಾನೇಜ್ ಮೆಂಟ್ ಕಾಲೇಜನ್ನು ಖರೀದಿಸಿರುವ ಖೇಣಿ, ನಂದಿ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ ಮೆಂಟ್ ಎಂದು ನಾಮಕಾರಣ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಅವಕಾಶಗಳು ದುಬಾರಿ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಖೇಣಿ ಆಲೋಚನೆ ನಡೆಸಿದ್ದರು. ಅವರ ಚಿಂತನೆ ಈಗ ಕಾರ್ಯರೂಪಕ್ಕೆ ಬಂದಿದ್ದು, ಕಾಲೇಜು ಉದ್ಘಾಟನೆಗಾಗಿ ಸಜ್ಜಾಗಿ ನಿಂತಿದೆ.

ಕರ್ನಾಟಕಕ್ಕೆ ಆಗಮಿಸಿ ನೈಸ್ ರಸ್ತೆ ಯೋಜನೆ ಪ್ರಾರಂಭಿಸಿದ ಖೇಣಿ ನಂತರ ಉದ್ಯಮಿಯಾಗಿ, ರಾಜಕಾರಣಿಗಳಾಗಿ ಬೆಳೆದಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದಿಂದ ಕರ್ನಾಟಕ ಮಕ್ಕಳ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ವಿಧಾಸಭೆ ಪ್ರವೇಶಿಸಿದ್ದಾರೆ.(ಬೀದರ್ ಜಿಲ್ಲೆ ಸೋತು ಗೆದ್ದವರು)

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಆದರೆ, ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ. ಆದ್ದರಿಂದ ಬೆಂಗಳೂರಿನಲ್ಲಿ ಕಾಲೇಜು ಆರಂಭಿಸಿದ್ದೇನೆ. ಉತ್ತರ ಕರ್ನಾಟಕ ಬೀದರ್ ಮುಂತಾದ ಜಿಲ್ಲೆಗಳಲ್ಲೂ ಕಾಲೇಜು ಆರಂಭಿಸುತ್ತೇನೆ ಎಂದು ಖೇಣಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಉಚಿತ ಪ್ರವೇಶ : ಉತ್ತಕ ಕರ್ನಾಟಕ ಭಾಗದ 200 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಂದಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮತ್ತು ಎಂಬಿಎ ಪದವಿಗೆ ಉಚಿತ ಪ್ರವೇಶ ನೀಡಲು ಖೇಣಿ ನಿರ್ಧರಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿಯೂ ನಂದಿ ಕಾಲೇಜಗಳನ್ನು ತೆರೆಯಲು ಅವರು ತೀರ್ಮಾನಿಸಿದ್ದಾರೆ.

ಶೀಘ್ರವೇ ಉದ್ಘಾಟನೆ : ಅಶೋಕ್ ಖೇಣಿ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಅಲ್ಲಿಂದ ಮರಳಿದ ನಂತರ ನಂದಿ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ ಮೆಂಟ್ ಕಾಲೇಜು ಉದ್ಘಾಟನೆ ಮಾಡಲು ಖೇಣಿ ಚಿಂತನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+